ಉತ್ತರ ಕನ್ನಡ

ಮುಂದುವರಿದ ವೈದ್ಯರ ಮುಷ್ಕರ

Published On :

ಶಿರಸಿ:  ವಿವಿಧ ಬೇಡಿಕೆ ಈಡೇರಿಕೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಸರ್ಕಾರಿ ಆಸ್ಪತ್ರೆ ವೈದ್ಯರ ಮುಷ್ಕರ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರವೂ ಮುಂದುವರಿದಿದೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಣೆ ಮಾಡುವ ಪೂರ್ಣಾವಧಿ ವೈದ್ಯರು ಕೆಲಸಕ್ಕೆ ಹಾಜರಾಗಿರಲಿಲ್ಲ. ಇದರಿಂದಾಗಿ ಅರೆಕಾಲಿಕ ವೈದ್ಯರು ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದರು. ತುರ್ತು ಸೇವೆಗಳು, ಹೆರಿಗೆ ಸೌಲಭ್ಯಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಅವಧಿಯ ಮೇರೆಗೆ ವೈದ್ಯರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮುಷ್ಕರದಿಂದಾಗಿ ಹೊರ ಊರುಗಳಿಂದ ಚಿಕಿತ್ಸೆಗಾಗಿ ಆಗಮಿಸಿದ ರೋಗಿಗಳು ತೊಂದರೆ ಅನುಭವಿಸಬೇಕಾಯಿತು. ಮುಷ್ಕರದ ಸುದ್ದಿಯನ್ನು ತಿಳಿದ ನಗರ ಪ್ರದೇಶದ ರೋಗಿಗಳು ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡರೆ, ಹೊರ ಪ್ರದೇಶದಿಂದ ಆಗಮಿಸಿದ ರೋಗಿಗಳು ವೈದ್ಯರಿಗಾಗಿ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಡಳಿತ ಇದುವರೆಗೂ ಯಾವುದೇ ಬದಲಿ ವ್ಯವಸ್ಥೆ ಕೈಗೊಂಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.