21ರಿಂದ ರಾಜ್ಯ ಮಟ್ಟದ ಕೃಷಿಮೇಳ: ಆಮಂತ್ರಣ ಪತ್ರಿಕೆ ಬಿಡುಗಡೆ
ಕುಮಟಾ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಫೆ. 21ರಿಂದ 23ರ ವರೆಗೆ ರಾಜ್ಯ ಮಟ್ಟದ 33ನೇ ಕೃಷಿಮೇಳ ಇಲ್ಲಿನ ನೆಲ್ಲಿಕೇರಿ ರಸ್ತೆಯಲ್ಲಿರುವ ಕೃಷಿ ಸಂಶೋಧನಾ ಕೇಂದ್ರದ ಬಯಲು ಪ್ರದೇಶದಲ್ಲಿ ಜರುಗಲಿದೆ. ಮೇಳದ ಆಮಂತ್ರಣ ಪತ್ರಿಕೆಯನ್ನು ಕೃಷಿಮೇಳದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಶಾಸಕ ದಿನಕರ ಶೆಟ್ಟಿ ಬಿಡುಗಡೆಗೊಳಿಸಿದರು. ಸಮಿತಿ ಕಾರ್ಯದರ್ಶಿ ರತ್ನಾಕರ ನಾಯ್ಕ, ಸಮಿತಿ ಸದಸ್ಯ ಡಾ. ಜಿ.ಜಿ. ಹೆಗಡೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉತ್ತರ ಕನ್ನಡ ನಿರ್ದೇಶಕ ಕೆ. ಬೂದಪ್ಪ ಗೌಡ, ಯೋಜನೆಯ ಯೋಜನಾಧಿಕಾರಿ ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಇದ್ದರು. ಫೆ. 21ರಂದು ಬೆಳಗ್ಗೆ 11ಕ್ಕೆ ಧರ್ಮಸ್ಥಳದ ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನದ ಸರಸ್ವತಿ ಸ್ವಾಮೀಜಿಗಳು ಕೃಷಿ ಮೇಳ ಉದ್ಘಾಟಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು. ವಸ್ತು ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸುವರು. ಜಾನಪದ ವಸ್ತು ಪ್ರದರ್ಶನವನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್.ಆರ್. ಹಂಚಿನಾಳ ಉದ್ಘಾಟಿಸುವರು. ವಿಚಾರಗೋಷ್ಠಿಯನ್ನು ಬೆಂಗಳೂರಿನ ನಬಾರ್ಡ್ ಮುಖ್ಯ ಮಹಾಪ್ರಬಂಧಕ ಎಸ್.ಎನ್.ಎ. ಜನ್ನು ಉದ್ಘಾಟಿಸುವರು. ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಹೆಗಡೆ, ಜಿಲ್ಲಾಧಿಕಾರಿ ಇಂಕಾಂಗ್ಲೋ ಜಮೀರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟಿ ಡಿ. ಸುರೇಂದ್ರ ಕುಮಾರ್, ಉಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೃಷ್ಣ ಗೌಡ ಮತ್ತಿತರರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

