ಮುಂಡಗೋಡ: ತಾಲೂಕಿನ ಮಳಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಬೆಳ್ಳಿಹಬ್ಬದ ಸಮಾರಂಭ ಫೆ. 16ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಲಿದ್ದಾರೆ. ಸಂಸದ ಅನಂತಕುಮಾರ ಹೆಗಡೆ ಮುಖ್ಯ ಶಿಕ್ಷಕರ ನೂತನ ಕೊಠಡಿ ಉದ್ಘಾಟಿಸುವರು. ಶಾಸಕ ವಿ.ಎಸ್. ಪಾಟೀಲ 'ನೂರೊಂದು ನೆನಪು' ಪ್ರದರ್ಶನ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ನಿವೃತ್ತ ಅಧೀಕ್ಷಕ ಅಭಿಯಂತರ ಸಿ.ಪಿ. ಪಾಟೀಲ ಅಧ್ಯಕ್ಷತೆ ವಹಿಸುವರು.