ಅಭಿವೃದ್ಧಿ ಚಿಂತನೆಯಿಂದ ಬೆಳವಣಿಗೆ
ಯಲ್ಲಾಪುರ: ಯಡಿಯೂರಪ್ಪನವರ ಅಭಿವೃದ್ಧಿಯ ಚಿಂತನೆಗಳು, 40 ವರ್ಷಗಳಿಂದ ರಾಜ್ಯದಲ್ಲಿ ಅವರು ಜನತೆಯೊಂದಿಗೆ ಹೊಂದಿರುವ ಸಂಬಂಧದ ಆಧಾರದ ಮೇಲೆ ಪಕ್ಷವನ್ನು ಬೆಳೆಸಲಾಗುತ್ತಿದೆ ಎಂದು ಕೆಜೆಪಿ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ ರಾಯಸಂದ್ರ ಹೇಳಿದರು.
ಬುಧವಾರ ಎಪಿಎಂಸಿ ಸಭಾಭವನದಲ್ಲಿ ಕೆಜೆಪಿ ಸಮಾವೇಶಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರದೊಳಗೆ ಜಿಲ್ಲಾ ಸಮಿತಿಯನ್ನು ರಚಿಸಿ, ಅಧಿಕೃತವಾಗಿ ಪ್ರಕಟಿಸಲಾಗುವುದು. ರಾಜ್ಯದಲ್ಲಿ ಕೆಜೆಪಿ ಪಕ್ಷ ಸಂಘಟನೆ ಚುರುಕುಗೊಳಿಸಲಾಗಿದ್ದು ಬರುವ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕೆಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಫೆ. 20ಕ್ಕೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಹಾಗೂ ಈ ತಿಂಗಳ ಅಂತ್ಯಕ್ಕೆ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ ಎಂದರು. ಯಲ್ಲಾಪುರ ಶಾಸಕ ವಿ.ಎಸ್. ಪಾಟೀಲ ಕೆಜೆಪಿ ಸೇರುವ ಕುರಿತಾದ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪನವರ ಕುರಿತು ಪಾಟೀಲ ಒಲವು ಹೊಂದಿದ್ದಾರೆ. ಪಕ್ಷ ಸೇರುವ ಬಗ್ಗೆ ಮುಂದಿನ ದಿನಗಳಲ್ಲಿ ಅವರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಅವ್ಯವಹಾರ: ಬಿಜೆಪಿ ನಾಯಕರು ಖಾಸಗಿ ವಿಶ್ವವಿದ್ಯಾಲಯಗಳಿಗೆ ಅನುಮತಿ ನೀಡುವ ಮೂಲಕ ರು. 100 ಕೋಟಿ ಅವ್ಯವಹಾರ ಎಸಗಿದ್ದು, ಇದರಲ್ಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಿದ್ದಾರೆ. ಈ ಮೂಲಕ ಪಕ್ಷಕ್ಕೆ ದೇಣಿಗೆ ಸಂಗ್ರಹದಲ್ಲಿ ತೊಡಗಿದ್ದಾರೆ. ಈ ಅವ್ಯವಹಾರದ ಕುರಿತು ಸಮಗ್ರ ತನಿಖೆಯಾಗಬೇಕು. ಅಲ್ಲಿಯವರೆಗೆ ರಾಜ್ಯಪಾಲರು ವಿಧೇಯಕಕ್ಕೆ ಅಂಕಿತ ಹಾಕಬಾರದೆಂದು ಅವರು ಒತ್ತಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ವಿರುದ್ಧ ಲೋಕಾಯುಕ್ತ ಕೋರ್ಟ್ನಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದ ಜನತೆಯ ಬಗ್ಗೆ ಪ್ರಾಮಾಣಿಕ ಕಳಕಳಿ ಇದ್ದಲ್ಲಿ ಮುಖ್ಯಮಂತ್ರಿಗಳು ಸರ್ಕಾರ ವಿಸರ್ಜಿಸಿ ಹೊಸ ಜನಾದೇಶಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಪಕ್ಷದ ಜಿಲ್ಲಾ ಸಂಚಾಲಕ ರವಿ ಹೆಗಡೆ ಹೂವಿನಮನೆ ಮಾತನಾಡಿದರು. ಪಕ್ಷದ ಜಿಲ್ಲಾ ಪ್ರಮುಖರಾದ ಎಸ್.ಎಂ. ಹೆಗಡೆ ಹಿರೆಕೈ, ಗೋಪಾಲಕೃಷ್ಣ ಭಟ್ಟ ಹಂಡ್ರಮನೆ, ಮೋಹನ ನಾಯ್ಕ, ದತ್ತಾತ್ರಯ ಶೆಟ್ಟಿ ಕುಮಟಾ, ತಿಮ್ಮಣ್ಣ ಘಟ್ಟಿ, ಅಪ್ಪು ಆಚಾರಿ, ವಿ.ಎನ್. ಹೆಗಡೆ ಹಾದಿಮನೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

