ದಾಂಡೇಲಿ: ಇಲ್ಲಿನ ಗಾಂಧಿನಗರದ ನಾಲಾದಲ್ಲಿ ಕಂಡುಬಂದ 1.5 ಮೀಟರ್ ಉದ್ದದ ಮೊಸಳೆಯನ್ನು ಸುರಕ್ಷಿತವಾಗಿ ಕಾಳಿ ನದಿಗೆ ಬಿಡಲಾಗಿದೆ ಎಂದು ದಾಂಡೇಲಿಯ ಪರಿಸರ ಸಂರಕ್ಷಣಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಫೆ. 13ರಂದು ಈ ಮೊಸಳೆ ನಾಲೆಯಲ್ಲಿ ಪ್ರತ್ಯಕ್ಷವಾಗಿತ್ತು. ಅದನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಫೆ. 14ರಂದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ಮೊಸಳೆಯನ್ನು ಹಿಡಿಯಲಾಗಿದೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೀರ್ತಿ ಗಾಂವಕರ, ಸಂಸ್ಥೆ ನಿರ್ದೇಶಕ ಮೋಹನ ಹಲವಾಯಿ, ಅನಿಲ ದಂಡಗಲ, ಉದ್ದಿಮೆದಾರ ರಫೀಕ್ ಖಾನ್ ಇದ್ದರು.
ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಹಿರೇಮಠ ಮಾರ್ಗದರ್ಶನದಲ್ಲಿ ಉಪ ಅರಣ್ಯಾಧಿಕಾರಿ ನದಾಫ್ ಹಾಗೂ ಸಿಬ್ಬಂದಿ ಮೊಸಳೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದಾಂಡೇಲಿ ಪರಿಸರ ಸಂರಕ್ಷಣಾ ಸಂಸ್ಥೆ ತಿಳಿಸಿದೆ.