ಶಿರಸಿ: ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸೀತಾರಾಮ ಕಾನಳ್ಳಿಯವರ 'ರಂಗಪ್ರವೇಶ' ಕಥಾ ಸಂಕಲನದ ಲೋಕಾರ್ಪಣೆ ಸಮಾರಂಭ ಜ. 27ರಂದು ಮಧ್ಯಾಹ್ನ 3.30ಕ್ಕೆ ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ಖ್ಯಾತ ಲೇಖಕಿ ಭಾಗೀರಥಿ ಹೆಗಡೆ ಪುಸ್ತಕ ಬಿಡುಗಡೆ ಮಾಡಲಿದ್ದು, ಹೆಗಡೆಕಟ್ಟಾ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ.ಪಿ. ಹೆಗಡೆ, ಕೊಟ್ಟೇಗದ್ದೆ ಅಧ್ಯಕ್ಷತೆ ವಹಿಸಲಿದ್ದಾರೆ. ಬರಹಗಾರ ಟಿ.ಎಂ. ಜಗದೀಶ ಕೃತಿ ಪರಿಚಯ ಮಾಡಲಿದ್ದಾರೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.