ಯಲ್ಲಾಪುರದಲ್ಲಿ ಗಣರಾಜ್ಯೋತ್ಸವ

Updated on: 

ಯಲ್ಲಾಪುರ: ಯಲ್ಲಾಪುರ ತಾಲೂಕಿನಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆ, ಕಾಲೇಜು, ಸರ್ಕಾರಿ  ಬ್ಯಾಂಕ್, ಎಪಿಎಂಸಿ ಶಿಕ್ಷಣ ಸಂಸ್ಥೆಗಳಲ್ಲಿ ಧ್ವಜವಂದನೆ ಸಲ್ಲಿಸಲಾಯಿತು. ಪಟ್ಟಣದ ಭಾರತೀಯ ಜೀವವಿಮಾ ನಿಗಮದ ಕಾರ್ಯಾಲಯದಲ್ಲಿಯೂ ಗಣರಾಜ್ಯೋತ್ಸವ ಆಚರಿಸಲಾಯಿತು. ಪಟ್ಟಣದ ಮಲೆನಾಡು ಕೃಷಿ ಅಭಿವೃದ್ಧಿ ಸೊಸೈಟಿ ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ ಕಚೇರಿ ಎದುರು ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ನಿರ್ದೇಶಕರು   ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲೂ ಗಣರಾಜ್ಯೋತ್ಸವ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಗೌರವ ಕಾರ್ಯದರ್ಶಿ  ನರಸಿಂಹಮೂರ್ತಿ ಭಟ್ಟ ಧ್ವಜಾರೋಹಣ ನಡೆಸಿ, ಸಾಂದರ್ಭಿಕವಾಗಿ ಮಾತನಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com