ಕಾರವಾರ: ಆನೆಕಾಲು ರೋಗ ನಿಯಂತ್ರಣಕ್ಕಾಗಿ ಸಾಮೂಹಿಕ ಔಷಧಿ ಸೇವನೆ ಕಾರ್ಯಕ್ರಮ ಮಾ. 5ರಿಂದ 7ರ ವರೆಗೆ ನಡೆಯಲಿದೆ ಎಂದು ಡಾ. ಅಶೋಕ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಫೆ. 12ರಂದು ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರಣಾಂತರಗಳಿಂದ ಮುಂದೂಡಿ ಹೊಸ ದಿನಾಂಕ ನಿಗದಿಪಡಿಸಲಾಗಿದೆ. ತಮ್ಮ ಮನೆಗಳಿಗೆ ಬರುವ ಆರೋಗ್ಯ ಕಾರ್ಯಕರ್ತರು ನೀಡುವ ಗುಳಿಗೆಗಳನ್ನು ತಪ್ಪದೆ ಸೇವಿಸಿ ಆನೆಕಾಲು ವಿರುದ್ಧ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.