ಚಿತ್ತ ಮತ ಎಣಿಕೆಯತ್ತ
ಕಾರವಾರ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಮರ ಮುಗಿದಿದೆ. ಈಗ ಎಲ್ಲರ ಗಮನ ಮಾ. 11ರಂದು ನಡೆಯಲಿರುವ ಮತ ಎಣಿಕೆಯತ್ತ ಕೇಂದ್ರೀಕೃತವಾಗಿದೆ.
ಕಾರವಾರದಲ್ಲಿ ಸೇಂಟ್ ಜೋಸೆಫ್ ಶಾಲೆಯಲ್ಲಿ ಮತ ಎಣಿಕೆ ನಡೆಯಲಿದ್ದು, ಗುರುವಾರ ರಾತ್ರಿ 9 ಗಂಟೆಗೆ ವಿವಿಧ ವಾರ್ಡ್ಗಳಿಂದ ಆಗಮಿಸಿದ ಮತಯಂತ್ರಗಳನ್ನು ಭದ್ರತಾ ಕೊಠಡಿಯಲ್ಲಿಟ್ಟು ಬೀಗಮುದ್ರೆ ಹಾಕಲಾಯಿತು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತಯಂತ್ರಗಳನ್ನು ಆಯಾ ತಾಲೂಕಿನಲ್ಲಿ ನಿಗದಿ ಪಡಿಸಿದ ಭದ್ರತಾ ಕೊಠಡಿಗಳಲ್ಲಿ ಭದ್ರವಾಗಿ ಇಡಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಬಿಗಿಯಾದ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಚುನಾವಣೆ ಮುಗಿಯುತ್ತಿದ್ದಂತೆ ಶೇಕಡಾವಾರು ಮತದಾನದ ಆಧಾರದ ಮೇಲೆ ವಿವಿಧ ರಾಜಕೀಯ ಪಕ್ಷಗಳು ಗೆಲುವು-ಸೋಲಿನ ಲೆಕ್ಕಾಚಾರದಲ್ಲಿ ತೊಡಗಿವೆ. ಕಾರವಾರದಲ್ಲಿ ಬಿಜೆಪಿಯವರು ತಾವೇ ಮೇಲುಗೈ ಸಾಧಿಸಲಿದ್ದೇವೆ ಎಂದರೆ, ಕಾಂಗ್ರೆಸ್ ಪಕ್ಷದ ಮುಖಂಡರು ತಾವು ಅಧಿಕಾರಕ್ಕೇರುವುದು ನಿಶ್ಚಿತ ಎಂದು ಹೇಳಿದ್ದಾರೆ. ಈ ನಡುವೆ ಮೀನುಗಾರಿಕೆ, ವಿಜ್ಞಾನ, ತಂತ್ರಜ್ಞಾನ ಸಚಿವ ಆನಂದ ಅಸ್ನೋಟಿಕರ್, ಕಾರವಾರ ನಗರಸಭೆ ಹಾಗೂ ಅಂಕೋಲಾ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ನಮಗೆ ಪ್ರತಿಸ್ಪರ್ಧಿಗಳೇ ಇಲ್ಲ. ರಾಜ್ಯದ ಎಲ್ಲೆಡೆ ಬಿಜೆಪಿ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.
ಕಾರವಾರ ನಗರಸಭೆಯ 19ನೇ ವಾರ್ಡಿನಲ್ಲಿ ವ್ಯಕ್ತಿಯೊಬ್ಬ ತಾನು ರಿಟರ್ನಿಂಗ್ ಅಧಿಕಾರಿ ಎಂದು ಹೇಳಿ ಮತಗಟ್ಟೆಯೊಳಗೆ ಪ್ರವೇಶಿಸಿ ಗಲಿಬಿಲಿ ಉಂಟುಮಾಡಿದ ಘಟನೆ ನಡೆದಿದೆ. ಇಂತಹ ಚಿಕ್ಕಪುಟ್ಟ ಘಟನೆಗಳಿಗೆ ಜಿಲ್ಲೆಯಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಸಾಕ್ಷಿಯಾಯಿತು. ಈಗ ವಿವಿಧ ರಾಜಕೀಯ ಪಕ್ಷಗಳು, ಕಾರ್ಯಕರ್ತರು, ಮತದಾರರು ಮಾ. 11ರಂದು ನಡೆಯಲಿರುವ ಮತ ಎಣಿಕೆಯ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ. ಫಲಿತಾಂಶ ಎಲ್ಲರನ್ನೂ ತುದಿಗಾಲಿನ ಮೇಲೆ ನಿಲ್ಲಿಸಿದೆ. ಆದರೆ ಫಲಿತಾಂಶಕ್ಕಾಗಿ ಮಾ. 11ರ ತನಕ ಕಾಯಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

