ಉತ್ತರ ಕನ್ನಡ

ಗುದ್ದಲಿಪೂಜೆ ಮಾಡಿಯೂ ಗದ್ದುಗೆ ಕಳೆದು ಕೊಂಡರು

Published On :

ಶಿರಸಿ: ಗಲ್ಲಿಗಲ್ಲಿಯಲ್ಲಿ ಗುದ್ದಲಿ ಪೂಜೆ ಮಾಡಿಯೂ ಗದ್ದುಗೆ ಕಳೆದುಕೊಂಡರು. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಹೊತ್ತಿರುವ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿ ನಗರಸಭೆಯ ವ್ಯಾಪ್ತಿಯಲ್ಲಿಯ ಪ್ರತಿಯೊಂದು ವಾರ್ಡ್‌ನ ಒಂದಲ್ಲ ಒಂದು ಕಾಮಗಾರಿಗೆ ಗುದ್ದಲಿಪೂಜೆ ಮಾಡಿದ್ದರು. ಆದರೂ ನಗರಸಭೆಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಾಗಲಿಲ್ಲ. ಪಕ್ಷ ಹೀನಾಯವಾಗಿ ಸೋಲೊಪ್ಪಿಕೊಳ್ಳುವಂತಾಗಿದೆ. ಬಿಜೆಪಿಯ ಕಚ್ಚಾಟ, ಅಭಿವೃದ್ಧಿ ಹೆಸರಿನಲ್ಲಿ ಕಳಪೆ ಕಾಮಗಾರಿ ಸೋಲಿಗೆ ಪ್ರಮುಖ ಕಾರಣ ಎನ್ನಬಹುದಾಗಿದೆ. ಆಶ್ಚರ್ಯಕರ ಬೆಳವಣಿಗೆಯಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಖಾತೆ ತೆರೆದು ಹುಬ್ಬೇರಿಸುವಂತೆ ಮಾಡಿದೆ. ಜೆಡಿಎಸ್ ಕಳೆದ ಚುನಾವಣೆಗಿಂತ ಉತ್ತಮ ಪ್ರದರ್ಶನ ನೀಡಿದ್ದರೂ ಗೆಲುವು ಸಾಧಿಸಲು ವಿಫಲಗೊಂಡಿದೆ. ಕಾರ್ಯಕರ್ತರ, ಸಂಘಟನೆ ಕೊರತೆಯಿಂದಾಗಿ ಮತದಾರನ ಮನ-ಮನೆ ತಲುಪುವಲ್ಲಿ ಯಶಸ್ವಿಯಾಗಲಿಲ್ಲ. ಕೆಜೆಪಿ ಎರಡಂಕಿ ಮತಗಳಿಂದ ಮುಂದಡಿಯಿಡಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.