ಮುಂಡಗೋಡ: ಕೋಡಂಬಿ, ಜೋಡಿಕಟ್ಟಾ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಸೋಮವಾರ ತಾಲೂಕಿನ ಪಾಳಾ ಕ್ರಾಸ್ ಶಿರಸಿ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಸುಮಾರು 1 ಗಂಟೆ ಕಾಲ ರಸ್ತೆ ತಡೆ ನಡೆಸಿದ ಘಟನೆ ನಡೆಯಿತು.
ನಿತ್ಯ ಮಾಧ್ಯಮಗಳಲ್ಲಿ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತ್ಯಾಚಾರ ಕೃತ್ಯ ಜನತೆಯಲ್ಲಿ ಭಯ ಸೃಷ್ಟಿಸಿದೆ. ಜೋಡಿಕಟ್ಟಾ ಗ್ರಾಮ ದಟ್ಟ ಅರಣ್ಯದ ನಡುವೆ ಇದ್ದು, ಯಾವುದೇ ಸಾರಿಗೆ ವ್ಯವಸ್ಥೆ ಇಲ್ಲ. ತಕ್ಷಣ ಈ ಭಾಗಕ್ಕೆ ಸಾರಿಗೆ ಸಂಸ್ಥೆ ಬಸ್ ಬಿಡಬೇಕು ಎಂದು ಪ್ರತಿಭಟನೆ ನಡೆಸಿದರು.
ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆ ತಡೆ ನಿಲ್ಲಿಸುವಂತೆ ಮನವಿ ಮಾಡಿದರು. ಇದಕ್ಕೆ ಬಗ್ಗದ ಪ್ರತಿಭಟನಾನಿರತರು, ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದರು. ತದನಂತರ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಾರದೊಳಗಾಗಿ ಬಸ್ ಬಿಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
Advertisement