Kannadaprabha The New Indian Express
2019 ಕನ್ನಡಿಗರಿಗೆ ಚೊಚ್ಚಲ ಪ್ರಶಸ್ತಿ ಗೆಲುವಿನ ಸುರಿಮಳೆ, ಮುಷ್ತಾಕ್ ಅಲಿ ಟೂರ್ನಿ ಗೆದ್ದ ಕರ್ನಾಟಕ! 
By select 
15 Mar 2019 12:00:00 AM IST

2019 ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಪ್ರಶಸ್ತಿಗಳ ಸುರಿಮಳೆಯಾಗಿದೆ. ಮೊದಲಿಗೆ ಬೆಂಗಳೂರು ತಂಡ ಪ್ರೊ ಕಬಡ್ಡಿ ಲೀಗ್ ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು. ಇದಾದ ಬಳಿಕ ಪಿಬಿಎಲ್ ನಲ್ಲೂ ಬೆಂಗಳೂರು ಚೊಚ್ಚಲ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿತ್ತು.

ಇದೀಗ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಕರ್ನಾಟಕ ತಂಡ ಮೊದಲ ಬಾರಿಗೆ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಹಾರಾಷ್ಟ್ರ ತಂಡವನ್ನು 155 ರನ್ ಗಳಿಗೆ ಕಟ್ಟಿ ಹಾಕಲಾಯಿತು. 

ಮಹಾರಾಷ್ಟ್ರ ನೀಡಿದ 156 ರನ್ ಗಳ ಗುರಿ ಪಡೆದ ಕರ್ನಾಟಕ ತಂಡದ ಪರ ರೋಹನ್ ಕದಂ ಹಾಗೂ ಮಯಾಂಕ್ ಅಗರ್ ವಾಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ತಂಡ ಮೊದಲ ಬಾರಿಗೆ ಚೊಚ್ಚಲ ಪ್ರಶಸ್ತಿ ಗೆದ್ದು ಬೀಗಿತು.

ಇನ್ನು ರಣಜಿ ಹಾಗೂ ವಿಜಯ್ ಹಜಾರೆ ಟೂರ್ನಿಯಲ್ಲಿ ಅನುಭವಿಸಿದ್ದ ಸೋಲನ್ನು ಮೀರಿ ಕರ್ನಾಟಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Copyright � 2012 Kannadaprabha.com