Kannadaprabha The New Indian Express
ಧಾರವಾಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 7 ಕ್ಕೆ ಏರಿಕೆ, 55 ರಕ್ಷಣೆ, ಅವಶೇಷಗಳಡಿ ಇನ್ನೂ 15 ಜನ 
By select 
21 Mar 2019 12:00:00 AM IST

ಬೆಂಗಳೂರು: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಈವರೆಗೂ ಸುಮಾರು 55 ಮಂದಿಯನ್ನು ರಕ್ಷಣೆ ಮಾಡಲಾಗಿದೆ.  ಇನ್ನೂ 15 ಜನರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ. 

ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿತ್ತು. ಅವಶೇಷಗಳಡಿ ಇನ್ನೂ 15 ರಿಂದ 20 ಜನರು ಸಿಲುಕಿರುವ ಸಾಧ್ಯತೆಗಳಿವೆ ಎಂದು ಡಿಜಿಪಿ, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ವಿಭಾಗದ ಮುಖ್ಯಸ್ಥರಾಗಿರುವ ಎಂಎನ್ ರೆಡ್ಡಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂಎನ್ ನಾಗರಾಜ್ ಹೇಳಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ನಾವು ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಹೆಚ್ಚು ಗಮನಹರಿಸುತ್ತಿದ್ದೇವೆ. ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ನಡೆಯುತ್ತಿದೆ. ಎನ್ ಡಿಆರ್ ಎಫ್ ನ 2 ಹೆಚ್ಚುವರಿ ತಂಡಗಳನ್ನು ಕರೆಸಲಾಗಿದೆ. 150 ಪೊಲೀಸ್ ಸಿಬ್ಬಂದಿಗಳು, ಅಗ್ನಿಶಾಮಕ, ತುರ್ತು ಪರಿಸ್ಥಿತಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. 

Copyright � 2012 Kannadaprabha.com