Kannadaprabha The New Indian Express
ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ 
By select 
21 Mar 2019 12:00:00 AM IST

ಬಾರಾಮುಲ್ಲಾ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. 

ಘಟನೆಯಲ್ಲಿ ಓರ್ವ ಸೇನಾಧಿಕಾರಿ ಸೇರಿದಂತೆ ಮೂವರು ಸೇನಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಶ್ರೀನಗರದ ರಕ್ಷಣಾ ವಿಭಾಗದ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಮಾಹಿತಿ ನೀಡಿದ್ದಾರೆ. 

ಉಗ್ರರ ಅಡಗುದಾಣಗಳ ಬಗ್ಗೆ ಖಚಿತ ಮಾಹಿತಿ ಪಡೆದು ಸೇನಾಧಿಕಾರಿಗಳು ದಾಳಿ ನಡೆಸಿದ್ದಾರೆ. ಸೇನೆಯಿಂದ ಎನ್ ಕೌಂಟರ್ ಮುಂದುವರೆದಿದೆ. 

Copyright � 2012 Kannadaprabha.com