Kannadaprabha The New Indian Express
ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ತೇಜಸ್ವಿ ಸೂರ್ಯ ಬಹಿರಂಗ ಸವಾಲು! 
By select 
21 May 2019 12:00:00 AM IST

ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗವಾದ ಬೆನ್ನಲ್ಲೇ ಮತ್ತೆ ಮತಯಂತ್ರಗಳ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಉದ್ಭವಿಸಿದ್ದು, ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬಹಿರಂಗ ಸವಾಲೆಸೆದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಜನ ಪ್ರತಿನಿಧಿಗಳು ಅದೇ ಇವಿಎಂಗಳ ಮೂಲಕವೇ ಗೆದ್ದು ಬಂದವರಾಗಿದ್ದಾರೆ. ಹೀಗಾಗಿ ಅವರು ಇವಿಎಂ ಸರಿಯಿಲ್ಲ ಎಂದು ಹೇಳಿ ತಮ್ಮ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ವಾಹಿನಿಯ ಚರ್ಚಾ ಕಾರ್ಯಕ್ರಮದಲ್ಲೂ ಕುರಿತಂತೆ ಕಿಡಿಕಾರಿರುವ ತೇಜಸ್ವಿ ಸೂರ್ಯ, ಫಲಿತಾಂಶ ಬಿಜೆಪಿ ಪರ ಬಂದರೆ ಇವರು ಮತಯಂತ್ರಗಳು ಸರಿಇಲ್ಲ ಎಂದು ಬೊಬ್ಬೆ ಇಡುತ್ತಾರೆ. ಅದೇ ಮಧ್ಯ ಪ್ರದೇಶದಲ್ಲಿ, ಆಂಧ್ರ ಪ್ರದೇಶದಲ್ಲಿ ಬಿಜೆಪಿಯೇತರ ಪಕ್ಷಗಳು ಅಧಿಕಾರಕ್ಕೆ ಬಂದಾಗ ಇದೇ ಇವಿಎಂಗಳ ವಿಶ್ವಾಸಾರ್ಹತೆ ಕುರಿತು ಚಕಾರವೆತ್ತುವುದಿಲ್ಲ. ಫಲಿತಾಂಶ ತಮ್ಮ ಪರವಾಗಿ ಬಾರದಿದ್ದರೆ ಮಾತ್ರ ಇವಿಎಂಗಳು ಸರಿ ಇಲ್ಲ ಎನ್ನುತ್ತಾರೆ ಎಂದು ಕಿಡಿಕಾರಿದ್ದಾರೆ.

Copyright � 2012 Kannadaprabha.com