Kannadaprabha The New Indian Express
ಜೂನ್ 1ರಿಂದ ಪ್ರಯಾಣ ದರ ಏರಿಕೆಯಾಗಲ್ಲ: ಸಚಿವ ತಮ್ಮಣ್ಣ ಸ್ಪಷ್ಟನೆ 
By select 
25 May 2019 12:00:00 AM IST

ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಇದುವರೆಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಸದ್ಯಕ್ಕೆ ಬಸ್ ದರ ಹೆಚ್ಚಳ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ.

ಯುಎನ್‍ಐ ಕನ್ನಡ ಸುದ್ದಿಸಂಸ್ಥೆ ಜೊತೆ ಮಾತನಾಡಿದ ಸಚಿವರು, ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಈ ಹಿಂದೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪ್ರಸ್ತಾಪ ಕಳುಹಿಸಲಾಗಿತ್ತಾದರೂ ಅದರ ಬಗ್ಗೆ ಇನ್ನೂ ಚರ್ಚೆಯೇ ನಡೆದಿಲ್ಲ. ನಮ್ಮ ಹಂತದಲ್ಲಿಯೂ ಇನ್ನೂ ಚರ್ಚೆಯಾಗಿಲ್ಲ. ಪ್ರಯಾಣ ದರ ಹೆಚ್ಚಳ ಬಗ್ಗೆ ಮುಖ್ಯಮಂತ್ರಿಗಳು ಅನುಮತಿ ನೀಡಿಲ್ಲ. ಪ್ರಸ್ತಾವನೆ ಇನ್ನೂ ಚರ್ಚೆಯ ಹಂತದಲ್ಲಿಯೇ ಮುಖ್ಯಮಂತ್ರಿ ಅವರ ಬಳಿಯಲ್ಲಿಯೇ ಇದೆ ಎಂದರು.

ಜೂನ್ 1 ರಿಂದ ಶೇ. 20 ರಷ್ಟು ಪ್ರಯಾಣ ದರ ಹೆಚ್ಚಳ ಎನ್ನುವುದು ಸುಳ್ಳು ಸುದ್ದಿಯಾಗಿದ್ದು, ಯಾರೂ ಈ ರೀತಿಯಾಗಿ ಸುಳ್ಳು ಸುದ್ದಿಯನ್ನು ಹರಡಿದ್ದಾರೆ ಎನ್ನುವುದು ತಿಳಿಯಬೇಕಿದೆ. ಸದ್ಯಕ್ಕೆ ಬಸ್ ದರ ಹೆಚ್ಚಳ ಇಲ್ಲ ಎಂದರು.

Copyright � 2012 Kannadaprabha.com