Kannadaprabha The New Indian Express
ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ರಿಪೂನ್ ಬೋರಾ ರಾಜೀನಾಮೆ 
By select 
26 May 2019 12:00:00 AM IST

ಗುವಾಹತಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ನಲ್ಲಿ ಈಗ ರಾಜೀನಾಮೆ ಪರ್ವ ಆರಂಭವಾಗಿದ್ದು, ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಿಪೂನ್ ಬೋರಾ ಅವರು ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ. ಅಸ್ಸಾಂನಲ್ಲಿ ಕಾಂಗ್ರೆಸ್ ಸೋಲಿಗೆ ಏನೇ ಕಾರಣಗಳಿರಬಹುದು. ಆದರೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮುಂದುವರೆಯಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ ಎಂದು ಬೋರಾ ಹೇಳಿದ್ದಾರೆ.

ಇದಕ್ಕು ಮುನ್ನ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಚವಾಣ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Copyright � 2012 Kannadaprabha.com