Kannadaprabha The New Indian Express
ವರ್ಜಿನೀಯಾ: ಅಪರಿಚಿತ ವ್ಯಕ್ತಿಯಿಂದ ಗುಂಡಿನ ದಾಳಿ; ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ 
By select 
01 Jun 2019 12:00:00 AM IST

ವಾಷಿಂಗ್ಟನ್: ವ್ಯಕ್ತಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 13 ಮಂದಿ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಅಮೆರಿಕದ ವರ್ಜಿನಿಯಾ ಬೀಚ್ ನಲ್ಲಿ ನಡೆದಿದೆ.
ಶುಕ್ರವಾರ ಮಧ್ಯಾಹ್ನ ವರ್ಜಿನಿಯಾದ ಮುನಿಸಿಪಲ್ ಸೆಂಟರ್ ನ ಎರಡನೇ ಕಟ್ಟಡದಲ್ಲಿ ಘಟನೆ ನಡೆದಿದ್ದು, ಆರಂಭದಲ್ಲಿ ಸಾಮೂಹಿಕ ಗುಂಡಿನ ದಾಳಿಗೆ 11 ಮಂದಿ ಬಲಿಯಾಗಿದ್ದು, ಆರು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮುಖ್ಯಸ್ಥ ಜಿಮ್ ಸರ್ವೆರಾ ತಿಳಿಸಿದ್ದರು. ಇದೀಗ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 13 ಮಂದಿ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಗುಂಡಿನ ದಾಳಿ ನಡೆಸಿದ ವ್ಯಕ್ತಿ ಸ್ಥಳೀಯ ನೌಕರನಾಗಿದ್ದಾನೆ ಎನ್ನಲಾಗಿದ್ದು, ಪೊಲೀಸರು ಪ್ರತಿದಾಳಿ ನಡೆಸಿ ಆತನನ್ನು ಹೊಡೆದುರುಳಿಸಿದ್ದಾರೆ.

ನವೆಂಬರ್ ನಂತರ ನಡೆದ ಅತಿ ದೊಡ್ಡ ಮಾರಣಾಂತಿಕ ದಾಳಿ ಇದಾಗಿದ್ದು, ನವಂಬರ್ ತಿಂಗಳಲ್ಲಿ ಕ್ಯಾಲಿಫೋರ್ನಿಯಾದ ಥೌಸಂಡ್ ಓಕ್ಸ್ನಲ್ಲಿ ಬಾರ್ಡರ್ಲೈನ್ ಬಾರ್ ಮತ್ತು ಗ್ರಿಲ್ ನಲ್ಲಿ ನಡೆದ ದಾಳಿಯಲ್ಲಿ ಸುಮಾರು 12 ಮಂದಿ ಮೃತಪಟ್ಟಿದ್ದರು.

ದಾಳಿಗೆ ಪ್ರತಿಕ್ರಿಯಿಸಿರುವ ಅಲ್ಲಿನ ಮೇಯರ್ ಬಾಬಿ ಡೇಯರ್ "ವರ್ಜಿನಿಯಾ ಬೀಚ್ ಇತಿಹಾಸದಲ್ಲೇ ಇದು ಅತ್ಯಂತ ವಿನಾಶಕಾರಿ ದಾಳಿಯಾಗಿದೆ" ಎಂದು ದುಃಖ ವ್ಯಕ್ತಪಡಿಸಿದ್ದಾರೆ.

Copyright � 2012 Kannadaprabha.com