ಸಂಪಾದಕೀಯ

ಕಬ್ಬಿಗೆ ಸೂಕ್ತ ಬೆಲೆ ಸಿಗಲಿ

Published On :

ಕಬ್ಬು ನಮ್ಮ ದೇಶದ ಮತ್ತು ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಅತಿ ಹೆಚ್ಚು ಕಬ್ಬು ಉತ್ಪಾದನೆಯಾಗುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎನ್ನುವುದು ಹೆಮ್ಮೆಯ ವಿಷಯ. ಆದರೆ ಉತ್ಪಾದನೆಗೆ ತಕ್ಕಂತೆ ಸೂಕ್ತ ಬೆಲೆ ಇಲ್ಲದಿರುವುದು ವಿಪರ್ಯಾಸವೇ ಸರಿ. ಹೆಚ್ಚುತ್ತಲೇ ಇರುವ ಕಬ್ಬು ನಿರ್ವಹಣೆಯ ವೆಚ್ಚವನ್ನು ಆದಾಯದೊಂದಿಗೆ ಸರಿದೂಗಿಸಲು ಕಬ್ಬು ಬೆಳೆಗಾರರು- ರೈತರು ಕಷ್ಟಪಡುತ್ತಿದ್ದಾರೆ. ಅದಕ್ಕೆ ಸರ್ಕಾರ ಕೂಡಲೆ ಎಸ್.ಎ.ಪಿ. ಕಾಯ್ದೆಯನ್ನು ಅನುಷ್ಠಾನಗೊಳಿಸಿ ಕಬ್ಬಿಗೆ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿ ಪಡಿಸಬೇಕೆಂದು ಒತ್ತಾಯಿಸಿ ಮತ್ತು ಕಬ್ಬಿಗೆ ಬೆಲೆ ನಿಗದಿ ಮಾಡುವಲ್ಲಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಖಂಡಿಸಿ ರೈತರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ರೈತರು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದು ಪ್ರತಿಭಟಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಸ್ತೆ ತಡೆ ಮೂಲಕ ಪ್ರತಿಭಟನೆ ಮಾಡುತ್ತಿರುವುದರಿಂದ ಜನಸಾಮಾನ್ಯರಿಗೆ ಮತ್ತು ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗಿದೆ. ಇಷ್ಟಾದರೂ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಅದಕ್ಕೆ ಸರ್ಕಾರ ಬೇಗನೆ ಕಬ್ಬಿಗೆ ವೈಜ್ಞಾನಿಕ ಬೆಂಬಲ ಬೆಲೆಯನ್ನು ನಿಗದಿಪಡಿಸಬೇಕಿದೆ. ಇಲ್ಲವಾದರೆ ಮುಂದಾಗಬಹುದಾದ ಅನಾಹುತಗಳಿಗೆ ಸರ್ಕಾರವೇ ಜವಾಬ್ದಾರಿ.
- ಇಂದ್ರಜಿತ ಎಸ್. ನಾಲವಾಡ, ಬಾಗಲಕೋಟೆ

ರೈತರಿಗಿಲ್ಲವೇ ಭಾಗ್ಯ?

ಸರ್ಕಾರವು ಕೇವಲ ಶಾದಿಭಾಗ್ಯ, ಅನ್ನಭಾಗ್ಯ, ಕ್ಷೀರಭಾಗ್ಯ ಮಾಡಿದರಾಗದು. ರೈತರಿಗಾಗಿ 'ಮಾರುಕಟ್ಟೆ ಭಾಗ್ಯ'ವನ್ನೂ ಮಾಡಬೇಕು. ರೈತರು ಬೆಳೆದಿರುವ ಬೆಳೆಗಳಿಗೆ ಸರಿಯಾದ ದಾಸ್ತಾನು ಒದಗಿಸಿ ಮಾರುಕಟ್ಟೆಯಲ್ಲಿ ಸರ್ಕಾರದ ಅಧಿಕಾರಿಗಳು ರೈತರಿಂದ ಖರೀದಿಸಿ ಸಮರ್ಪಕ ಬೆಲೆ ಸಿಗುವಂತೆ ನೋಡಿಕೊಳ್ಳುವುದರಿಂದ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ರೈತರು ಸಬಲರಾಗುತ್ತಾರೆ. ಗ್ರಾಹಕರಿಗೂ ಯೋಗ್ಯ ದರದಲ್ಲಿ ಕಾಯಿ-ಪಲ್ಲೆಗಳು ಸಿಗಲು ಸಾಧ್ಯ. ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿಯಲ್ಲಿ 1 ಕೆ.ಜಿ ಟೊಮೆಟೊಗೆ 80-85 ರು. ಕರ್ನಾಟಕದಲ್ಲಿ 10-15 ರುಪಾಯಿ ದರಗಳಲ್ಲಿ ವ್ಯತ್ಯಾಸದಿಂದ ರೈತರು ನಷ್ಟ ಹೊಂದಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಯೋಜನೆಗಳು ಬೇಕು.
- ಪ್ರವೀಣ ದಲಬಂಜನ, ಗಂಗಾವತಿ

ಕನ್ನಡಪ್ರಭ, ನಂ.1 ಕ್ವೀನ್ಸ್ ರಸ್ತೆ, ಬೆಂಗಳೂರು-560001.
email: anisikeprabha@gmail.com


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.