ರಾಜಾಹುಲಿ, ಐರಾವತ ಒಟ್ಟಾಗಿ ಬಂದ್ರೂ ಮಂಡ್ಯ ಚಕ್ರವ್ಯೂಹ ಭೇದಿಸೋದು ಅಭಿಮನ್ಯು ನಿಖಿಲ್!
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಘೋಷಿಸಿರುವುದು ಸದ್ಯ ರಾಜಕೀಯ ವಲಯದಲ್ಲಿ ಜೆಡಿಎಸ್ ಬಣಕ್ಕೆ ನುಗ್ಗಲಾರದ ತುತ್ತಾಗಿ ಪರಿಣಮಿಸಿದೆ.
ಮಂಡ್ಯ: ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸುಮಲತಾ ಅಂಬರೀಶ್ ಘೋಷಿಸಿರುವುದು ಸದ್ಯ ರಾಜಕೀಯ ವಲಯದಲ್ಲಿ ಜೆಡಿಎಸ್ ಬಣಕ್ಕೆ ನುಗ್ಗಲಾರದ ತುತ್ತಾಗಿ ಪರಿಣಮಿಸಿದೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬೆಂಬಲವಾಗಿ ನಿಂತಿರುವುದಕ್ಕೆ ಜೆಡಿಎಸ್ ಕಾರ್ಯಕರ್ತರು ಇಬ್ಬರು ಸ್ಟಾರ್ ನಟರ ವಿರುದ್ಧ ಆಕ್ರೋಶಗೊಂಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರು ಟ್ವೀಟ್ ನಲ್ಲಿ ನಿಖಿಲ್ ಪರವಾಗಿ ಟ್ವೀಟ್ ಮಾಡಿದ್ದು ದರ್ಶನ್ ಮತ್ತು ಯಶ್ ಅವರನ್ನು ಟೀಕಿಸುತ್ತಿದ್ದಾರೆ.