ಲೋಕಸಭೆ ಚುನಾವಣೆ: ಜಿದ್ದಾಜಿದ್ದಿನ ಕ್ಷೇತ್ರ ಚಿಕ್ಕಬಳ್ಳಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

ಈ ಬಾರಿ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1977 ರಿಂದ ಈವರೆಗೆ ಒಂದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಈ ಬಾರಿ ಜಿದ್ದಾಜಿದ್ದಿನ ಕ್ಷೇತ್ರಗಳಲ್ಲಿ ಒಂದಾಗಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1977 ರಿಂದ ಈವರೆಗೆ ಒಂದು ಬಾರಿ (1996) ಜೆಡಿಎಸ್‌ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಾಂಗ್ರೆಸ್‌ ಪಾರುಪತ್ಯವಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕೇವಲ ಒಂದು ಗಂಟೆ ಪ್ರಯಾಣದ ಅವಧಿ ಇರುವ ಚಿಕ್ಕಬಳ್ಳಾಪುರದಲ್ಲಿ ಅಭಿವೃದ್ಧಿ ಮರಿಚಿಕೆಯಾಗಿದ್ದು, ಅಲ್ಲಿನ ಜನ ಉದ್ಯೋಗಕ್ಕಾಗಿ ನಿತ್ಯ ಬೆಂಗಳೂರಿಗೆ ಆಗಮಿಸುತ್ತಾರೆ. 
2007ರಲ್ಲಿ ನೂತನ ಜಿಲ್ಲೆಯಾಗಿ ರಚನೆಯಾದ ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ 44 ಅನ್ನು ಹೊರತುಪಡಿಸಿದರೆ ಯಾವುದೇ ಮೂಲ ಸೌಕರ್ಯಗಳಿಲ್ಲ. ಜಿಲ್ಲೆಯಲ್ಲಿ ಯಾವುದೇ ಉತ್ತಮ ರಸ್ತೆಗಳಿಲ್ಲ ಮತ್ತು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ.
ಇಲ್ಲಿ ನೀರಿನ ಬಹು ದೊಡ್ಡ ಸಮಸ್ಯೆ ಇದೆ. ಅಂತರ್ಜಲದ ಕೊರತೆ ಇದೆ. ಪ್ರತಿ ಚುನಾವಣೆಯಲ್ಲೂ ನೀರಿನ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡುತ್ತಾರೆ. ಆದರೆ ಚುನಾವಣೆ ನಂತರ ಮರೆತುಬಿಡುತ್ತಾರೆ ಎಂದು ದೇವನಹಳ್ಳಿಯ ಹೋಟೆಲ್ ಮಾಲೀಕ ಎಸ್ ಮಹಾಲಿಂಗಪ್ಪ ಅವರು ಹೇಳಿದ್ದಾರೆ.
ಇಲ್ಲಿ ಕೃಷಿಗೂ ನೀರಿನ ಸಮಸ್ಯೆ ಇದ್ದು, ಬೆಳೆದ ಬೆಳೆಗೂ ಉತ್ತಮ ಬೆಲೆ ಸಿಗದೆ ಪ್ರತಿವರ್ಷ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಅಂಜನಪ್ಪ ಅವರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ, ಹಾಲಿ ಕಾಂಗ್ರೆಸ್ ಸಂಸದ ಡಾ.ಎಂ.ವೀರಪ್ಪಮೊಯ್ಲಿ ಅವರು ಪ್ರತಿನಿಧಿಸುತ್ತಿರುವ ಅವರು ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಕಾಂಗ್ರೆಸ್ - ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟಿದ್ದು, ಬಿಜೆಪಿಯಿಂದ ಮಾಜಿ ಸಚಿವ ಬಿಎನ್ ಬಚ್ಚೇಗೌಡ ಕಣದಲ್ಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಐದು, ಜೆಡಿಎಸ್ ಎರಡು ಹಾಗೂ ಬಿಜೆಪಿ ಒಂದು ಶಾಸಕರನ್ನು ಹೊಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿ ಕೇವಲ 9 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್-ಜೆಡಿಎಸ್ ಒಂದಾಗಿರುವುದರಿಂದ ಮತ್ತೆ ಮೊಯ್ಲಿ ಗೆಲ್ಲುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com