ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ಏರ್​ಲಿಫ್ಟ್​ ಮಾಡಿ, ಮಾನವೀಯತೆ ಮೆರೆದ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗುವನ್ನು...
ಮಗುವನ್ನು ಕರೆದೊಯ್ಯುತ್ತಿರುವ ವಿಮಾನ
ಮಗುವನ್ನು ಕರೆದೊಯ್ಯುತ್ತಿರುವ ವಿಮಾನ
Updated on
ನವದೆಹಲಿ: ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗುವನ್ನು ತಮ್ಮ ಖಾಸಗಿ ವಿಮಾನದ ಮೂಲಕ ದೆಹಲಿಗೆ ಏರ್​ಲಿಫ್ಟ್​ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಟ್ಯೂಮರ್​ನಿಂದ ಬಳಲುತ್ತಿದ್ದ ಬಾಲಕಿಯನ್ನು ಉತ್ತರ ಪ್ರದೇಶದ ಪ್ರಯಾಗ್​ರಾಜ್​ನ ಕಮಲಾ ನೆಹರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಬಾಲಕಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ದೆಹಲಿಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು.
ಈ ವಿಷಯವನ್ನು ಕಾಂಗ್ರೆಸ್ ನಾಯಕರೊಬ್ಬರು ಪ್ರಿಯಾಂಕಾ ಗಾಧಿ ಅವರ ಗಮನಕ್ಕೆ ತಂದಿದ್ದು, ಕೂಡಲೇ ವಿಮಾನದ ಮೂಲಕ ಬಾಲಕಿಯನ್ನು ದೆಹಲಿಯಲ್ಲಿ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗಿದೆ.
ಆರು ಸೀಟಿನ ಈ ವಿಮಾನದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕ್ರಿಕೆಟಿಗ ಅಜರುದ್ದೀನ್, ಬಾಲಕಿ ಅಂಶು ಹಾಗೂ ಆಕೆಯ ಪೋಷಕರು ದೆಹಲಿಗೆ ತೆರಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com