ಮೇ 23ರಂದು ಹುಟ್ಟಿದ ಮಗುವಿಗೆ 'ನರೇಂದ್ರ ಮೋದಿ' ಎಂದು ಹೆಸರಿಟ್ಟ ಮುಸ್ಲಿಂ ಕುಟುಂಬ

ಉತ್ತರ ಪ್ರದೇಶದ ಗೊಂಡಾದಲ್ಲಿ ಮುಸ್ಲಿಂ ಕುಟುಂಬವೊಂದು ಮೋದಿ ಜಯಗಳಿಸಿದ ದಿನದಂದು ಜನಿಸಿದ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರಿಟ್ಟಿದೆ.

Published: 25th May 2019 12:00 PM  |   Last Updated: 25th May 2019 08:55 AM   |  A+A-


Family Members With Infant

ಮಗುವಿನೊಂದಿಗೆ ಕುಟುಂಬ ಸದಸ್ಯರು

Posted By : ABN ABN
Source : ANI
ಗೊಂಡಾ: ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಜಯದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಜಯೋತ್ಸವ ಆಚರಿಸುತ್ತಿದ್ದರೆ, ಉತ್ತರ ಪ್ರದೇಶದ ಗೊಂಡಾದಲ್ಲಿ ಮುಸ್ಲಿಂ ಕುಟುಂಬವೊಂದು ಮೋದಿ ಜಯಗಳಿಸಿದ ದಿನದಂದು ಜನಿಸಿದ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರಿಟ್ಟಿದೆ.

ನರೇಂದ್ರ ಮೋದಿ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿದ ದಿನದಂದು ಗಂಡು ಜನಿಸಿದ  ಹಿನ್ನೆಲೆಯಲ್ಲಿ ದುಬೈಯಲ್ಲಿರುವ ಅವರ ತಂದೆ ಜೊತೆ ದೂರವಾಣಿ ಮೂಲಕ ಮಾತನಾಡಿ ನರೇಂದ್ರ ಮೋದಿ ಎಂದು ಹೆಸರು ಇಡಲಾಗಿದೆ ಎಂದು ಮಗುವಿನ ತಾತ ಮೊಹಮ್ಮದ್ ಇದ್ರೀಸ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರ ಆಡಳಿತ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಆ ಮಗುವಿನ ತಾಯಿ ಮೇನಜ್ ಬೇಗಂ, ಮೋದಿ ಅವರಂತೆ ಜೀವನದಲ್ಲಿ ಯಶಸ್ಸು ಸಾಧಿಸಲಿ ಎಂದು ಅವರ ಹೆಸರನ್ನು ಇಡಲಾಗಿದೆ ಎಂದು ಹೇಳಿದರು.

ಎರಡನೇ ಅವಧಿಯ ಮೋದಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರ ನಮ್ಮಗಾಗಿ ಉತ್ತಮ ಯೋಜನೆಗಳನ್ನು ಜಾರಿಗೊಳಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
Stay up to date on all the latest ಸ್ವಾರಸ್ಯ news with The Kannadaprabha App. Download now
facebook twitter whatsapp