2020ರೊಳಗೆ ಖಾಲಿ ಇರುವ 22 ಲಕ್ಷ ಸರ್ಕಾರಿ ಹುದ್ದೆ ಭರ್ತಿ: ರಾಹುಲ್ ಹೊಸ ಭರವಸೆ

ಶತಾಯಗತಾಯ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಸೋಲಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ರಾಹುಲ್ ಗಾಂಧಿ
ರಾಹುಲ್ ಗಾಂಧಿ
ನವದೆಹಲಿ: ಶತಾಯಗತಾಯ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಸೋಲಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತದಾರರನ್ನು ಒಲಿಸಿಕೊಳ್ಳಲು ದಿನಕ್ಕೊಂದು ತರಹೇವಾರಿ ಭರವಸೆಗಳನ್ನು ನೀಡುತ್ತಿದ್ದಾರೆ.
ಬಡವರಿಗೆ ವಾರ್ಷಿಕ 72 ಸಾವಿರ ರುಪಾಯಿ ಕನಿಷ್ಠ ಆದಾಯ, ನೂತನ ಜಿಎಸ್ ಟಿ ಜಾರಿ, ನೀತಿ ಆಯೋಗ ರದ್ದು, ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಮೂರು ವರ್ಷ ತೆರಿಗೆ ವಿನಾಯ್ತಿ ಭರವಸೆ ನೀಡಿದ್ದ ರಾಹುಲ್ ಗಾಂಧಿ, ಇದೀಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾರ್ಚ್ 31, 2020ರೊಳಗೆ ಖಾಲಿ ಇರುವ 20 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಕೇಂದ್ರ ಸರ್ಕಾರದಲ್ಲಿ 22 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಖಾಲಿ ಇವೆ. ನಾವು ಅಧಿಕಾರಕ್ಕೆ ಬಂದರೆ 2020ರ ಮಾರ್ಚ್ 31ರೊಳಗೆ ಎಲ್ಲ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಕೇಂದ್ರದ ಹಣವನ್ನು ಆರೋಗ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ವಿನಿಯೋಗಿಸಲೆಂದು ಎಲ್ಲಾ ರಾಜ್ಯಗಳಿಗೆ ನೀಡಲಿದ್ದೇವೆ. ಆಯಾ ಕ್ಷೇತ್ರಗಳಲ್ಲಿ ಖಾಲಿಯಿರುವ ಉದ್ಯೋಗವನ್ನು ಭರ್ತಿ ಮಾಡಲು ಈ ಹಣವನ್ನು ವಿನಿಯೋಗಿಸುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com