ನೀತಿಸಂಹಿತೆ ಉಲ್ಲಂಘನೆ: ರಾಜ್ಯಪಾಲ ಕಲ್ಯಾಣ್‌ ಸಿಂಗ್‌ ವಿರುದ್ಧ ರಾಷ್ಟ್ರಪತಿಗೆ ಪತ್ರ

ಕೇಂದ್ರದಲ್ಲಿ ಮತ್ತೊಮ್ಮೆ ಮೋದೀಜಿ ಪ್ರಧಾನ ಮಂತ್ರಿಯಾಗಬೇಕೆಂದು ಎಂದು ಹೇಳುವ ಮೂಲಕ ರಾಜಸ್ತಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ನೀತಿ ಸಂಹಿತೆ ಉಲ್ಲಂಘಿಸಿದ್ದು, ...
ಕಲ್ಯಾಣ್ ಸಿಂಗ್
ಕಲ್ಯಾಣ್ ಸಿಂಗ್
Updated on
ನವದೆಹಲಿ:  ಕೇಂದ್ರದಲ್ಲಿ ಮತ್ತೊಮ್ಮೆ ಮೋದೀಜಿ ಪ್ರಧಾನ ಮಂತ್ರಿಯಾಗಬೇಕೆಂದು ಎಂದು ಹೇಳುವ ಮೂಲಕ  ರಾಜಸ್ತಾನ ರಾಜ್ಯಪಾಲ  ಕಲ್ಯಾಣ್ ಸಿಂಗ್ ನೀತಿ ಸಂಹಿತೆ ಉಲ್ಲಂಘಿಸಿದ್ದು, ಈ ಸಂಬಂಧ ರಾಷ್ಟ್ರಪತಿಗಳಿಗೆ ಪತ್ರ ಬರೆಯಲು ಚುನಾವಣಾ ಆಯೋಗ ನಿರ್ಧರಿಸಿದೆ. 
ಇತ್ತೀಚೆಗೆ ಆಲಿಗಢದಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಮಾತನಾಡುತ್ತ ಕಲ್ಯಾಣ್ ಸಿಂಗ್ ಈ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಚುನಾವಣೆ ಆಯೋಗ ಪತ್ರ ಬರೆಯಲಿದೆ.
ಆಲಿಗಢ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಗೌತಮ್ ಅವರನ್ನು ಕಣಕ್ಕಿಳಿಸಿದ್ದರ ವಿರುದ್ಧ ಪಕ್ಷದಲ್ಲಿ ಉಂಟಾದ ಆಂತರಿಕ ಬಿಕ್ಕಟ್ಟು ಬಗೆಹರಿಸುವ ನಿಟ್ಟಿನಲ್ಲಿ ಕಲ್ಯಾಣ್‌ ಸಿಂಗ್ ಈ ಹೇಳಿಕೆ ನೀಡಿದ್ದರು. ರಾಜ್ಯಪಾಲರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಎರಡನೇ ಪ್ರಕರಣ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com