ನನಗೆ ಪ್ರಧಾನಿಯಾಗುವ ಬಯಕೆ ಇಲ್ಲ: ತೆಲಂಗಾಣ ಸಿಎಂ ಕೆಸಿಆರ್

ನನಗೆ ಪ್ರಧಾನಿಯಾಗುವ ಆಸಕ್ತಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮಂಗಳವಾರ ಹೇಳಿದ್ದಾರೆ.
ಕೆ ಚಂದ್ರಶೇಖರ್ ರಾವ್
ಕೆ ಚಂದ್ರಶೇಖರ್ ರಾವ್
Updated on
ವಾರಂಗಲ್: ನನಗೆ ಪ್ರಧಾನಿಯಾಗುವ ಆಸಕ್ತಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ವಾರಂಗಲ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಟಿಆರ್ ಎಸ್ ಮುಖ್ಯಸ್ಥ, ದೇಶದ ನಿಜವಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 16 ಕ್ಷೇತ್ರಗಳಲ್ಲೂ ಟಿಆರ್ ಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದ ಕೆಸಿಆರ್, ರಾಜ್ಯದ ಹಿತಾಸಕ್ತಿ ಮತ್ತು ಹಕ್ಕುಗಳ ರಕ್ಷಣೆಗಾಗಿ ಟಿಆರ್ ಎಸ್ ಕೆಲಸ ಮಾಡಲಿದೆ ಎಂದರು.
ತೆಲಂಗಾಣದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರ 35 ಸಾವಿರ ಕೋಟಿ ರುಪಾಯಿ ನೀಡಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಪ್ರಸ್ತಾಪಿಸಿದ ಕೆಸಿಆರ್, ಬರೀ ಸುಳ್ಳುಗಳನ್ನೇ ಹೇಳುತ್ತಿರುವ ಪ್ರಧಾನಿ ಮೋದಿ ಅವರು ತೆಲಂಗಾಣ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com