ಮೋದಿ 'ಎಕ್ಸ್‌ಪೈರಿ ಬಾಬು': ದೀದಿ ಸ್ಪೀಡ್ ಬ್ರೇಕರ್ ಹೇಳಿಕೆಗೆ ಮಮತಾ ಬ್ಯಾನರ್ಜಿ ತಿರುಗೇಟು

Published On :
ದಿನ್‌ಹಾಟಾ: ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ದೀದಿ ಸ್ಪೀಡ್ ಬ್ರೇಕರ್ ಆಗಿದ್ದಾರೆ ಎಂದು ತಮ್ಮ ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 'ಮೋದಿ ಎಕ್ಸ್‌ಪೈರಿ ಬಾಬು' ಎಂದು ತಿರುಗೇಟು ನೀಡಿದ್ದಾರೆ.
ಇಂದು ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ದೀದಿ, ರಾಜ್ಯದ ಜನರ ಕಲ್ಯಾಣಕ್ಕೆ ನನ್ನ ಸರ್ಕಾರ ಹಲವಾರು ಕೆಲಸಗಳನ್ನು ಮಾಡಿದೆ. ರಾಜ್ಯದ ರೈತರ ಆದಾಯವನ್ನು ನನ್ನ ಆಡಳಿತದ ಅವದಿಯಲ್ಲಿ ಮೂರು ಪಟ್ಟು ಏರಿಸಲಾಗಿದೆ ಎಂದು ಹೇಳಿದರು.
ಪ್ರಧಾನಿ ಮೋದಿಯನ್ನು ‘ಎಕ್ಸ್‌ಪೈರಿ ಬಾಬು’ ಮತ್ತು ‘ಎಕ್ಸ್‌ಪೈರಿ ಪಿಎಂ’ ಎಂದು ಲೇವಡಿ ಮಾಡಿದ ಮಮತಾ, ಮೋದಿಗೆ ಧೈರ್ಯವಿದ್ದರೆ ನನ್ನೊಂದಿಗೆ ನೇರವಾಗಿ ಟಿವಿ ಚರ್ಚೆ ನಡೆಸಲಿ ಎಂದು ಸವಾಲು ಹಾಕಿದರು.
ನಾನು ಮೋದಿ ಅಲ್ಲ, ಹೀಗಾಗಿ ನಾನು ಸುಳ್ಳು ಹೇಳುವುದಿಲ್ಲ ಎಂದು ಗುಡುಗಿದ ಮಮತಾ, ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ಕಾರ್ಯ ನಿರ್ವಹಣೆ ಬಗ್ಗೆ ಪ್ರಧಾನಿ ಮೋದಿ ಸುಳ್ಳುಗಳ ಸರಮಾಲೆಯನ್ನೇ ಹೆಣೆದಿದ್ದಾರೆ ಎಂದು ಆರೋಪಿಸಿದರು.
ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ದೇಶದಲ್ಲಿ 12,000 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಮತಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


