ಲೋಕಸಭಾ ಚುನಾವಣೆಗೆ ಇನ್ನು ಕೇವಲ 19 ದಿನಗಳು ಮಾತ್ರ ಬಾಕಿ ಇದ್ದು, ಈ ಹಂತದಲ್ಲಿ ಎಲ್ಲ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿವೆ. ಅಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದತೆ ಪಕ್ಷದ ಎಲ್ಲ ರಾಜಕೀಯ ಮುಖಂಡರು, ಸಚಿವರು, ಶಾಸಕರು ಸೇರಿದಂತೆ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಅತ್ತ ಪಂಜಾಬ್ ನಲ್ಲಿ ಮಾತ್ರ ಸಚಿವ ನವಜೋತ್ ಸಿಂಗ್ ಸಿಧು ಪ್ರಚಾರ ಕಾರ್ಯದಿಂದ ದೂರುವುಳಿದು ಅಚ್ಚರಿ ಮೂಡಿಸಿದ್ದಾರೆ.