ಪಂಜಾಬ್, ಹರ್ಯಾಣದಲ್ಲಿ ಎಎಪಿ ಜೊತೆ ಮೈತ್ರಿಗೆ ಮಾತುಕತೆ ಆಗಿಲ್ಲ- ಕಾಂಗ್ರೆಸ್

ಪಂಜಾಬ್ ಹಾಗೂ ಹರ್ಯಾಣದಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಹಾಗೂ ಇತರ ಯಾವುದೇ ಪಕ್ಷಗಳೊಂದಿಗೆ ಮಾತುಕತೆ ನಡೆದಿಲ್ಲ, ಸದ್ಯದಲ್ಲೇ ಈ ಎರಡು ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ:  ಪಂಜಾಬ್ ಹಾಗೂ ಹರ್ಯಾಣದಲ್ಲಿ  ಮೈತ್ರಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಹಾಗೂ ಇತರ ಯಾವುದೇ ಪಕ್ಷಗಳೊಂದಿಗೆ ಮಾತುಕತೆ ನಡೆದಿಲ್ಲ, ಸದ್ಯದಲ್ಲೇ ಈ ಎರಡು ರಾಜ್ಯಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಕಾಂಗ್ರೆಸ್ ಪಕ್ಷ  ಹೇಳಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಎಎಪಿ ಜೊತೆಗಿನ ಮೈತ್ರಿ ಸಂಬಂಧ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖ್ಯ  ವಕ್ತಾರ  ರಣದೀಪ್ ಸುರ್ಜಿವಾಲಾ ತಿಳಿಸಿದ್ದಾರೆ.

ಹರಿಯಾಣ ಹಾಗೂ ಚಂಡೀಘಡದಲ್ಲೂ ಮೈತ್ರಿ ಮಾಡಿಕೊಳ್ಳಲು ರಾಹುಲ್ ಗಾಂಧಿ ಒಪ್ಪಿಕೊಂಡರೆ ಮಾತ್ರ ದೆಹಲಿಯಲ್ಲೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಪಕ್ಷ ಚಿಂತಿಸಿದೆ ಎಂದು ಎಎಪಿ ನಾಯಕ ನಿನ್ನೆ ಹೇಳಿದ್ದರು.

ಲೋಕಸಭಾ ಚುನಾವಣೆಯ  ಪ್ರಚಾರದ ಧ್ಯೇಯವಾಕ್ಯ ಅಬ್ ಹೋಗಾ ನ್ಯಾಯ್ ಬಿಡುಗಡೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರ್ಜಿವಾಲಾ, ಹರ್ಯಾಣ ಅಥವಾ ಪಂಜಾಬ್ ನಲ್ಲಿ ಮೈತ್ರಿಗೆ ಸಂಬಂಧಿಸಿದಂತೆ ಎಎಪಿ ಅಥವಾ ಇತರ ಯಾವುದೇ ಪಕ್ಷಗಳೊಂದಿಗೆ ಮಾತುಕತೆ ನಡೆಸಿಲ್ಲ. ಸದ್ಯದಲ್ಲೇ  ಅಭ್ಯರ್ಥಿಗಳನ್ನು ಘೋಘಿಸಲಾಗುವುದು ಎಂದು ತಿಳಿಸಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿವಾಸದಲ್ಲಿ  ನಿನ್ನೆ ಚರ್ಚೆ ನಡೆಸಲಾಗಿತ್ತು.ದೆಹಲಿಗೆ ರಾಜ್ಯ ಸ್ಥಾನಮಾನ ನೀಡಿದ್ದರೆ ಸಂಪೂರ್ಣವಾಗಿ ಕಾಂಗ್ರೆಸ್ ಬೆಂಬಲಿಸುವುದಾಗಿ ಎಎಪಿ ಕಾಂಗ್ರೆಸ್ ಪಕ್ಷಕ್ಕೆ ಷರತ್ತು ಹಾಕಿತ್ತು.ಅಲ್ಲದೇ ಹರ್ಯಾಣ, ಗುರ್ ಗಾನ್, ಕರ್ನಲ್  ಕ್ಷೇತ್ರಗಳನ್ನು ಬಿಟ್ಟುಕೊಟ್ಟರೆ ಚಂಡಿಘಡದಲ್ಲಿ ಕಾಂಗ್ರೆಸ್ ಬೆಂಬಲಿಸುವುದಾಗಿ ಎಎಪಿ ಹೇಳಿಕೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com