ಬರೊಬ್ಬರಿ 2 ವರ್ಷಗಳ ನಂತರ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ-ಉದ್ಧವ್ ಠಾಕ್ರೆ

ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬರೊಬ್ಬರಿ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.
ಬರೊಬ್ಬರಿ 2 ವರ್ಷಗಳ ನಂತರ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ-ಉದ್ಧವ್ ಠಾಕ್ರೆ
ಬರೊಬ್ಬರಿ 2 ವರ್ಷಗಳ ನಂತರ ವೇದಿಕೆ ಹಂಚಿಕೊಂಡ ಪ್ರಧಾನಿ ಮೋದಿ-ಉದ್ಧವ್ ಠಾಕ್ರೆ
Updated on: 
ಲತೂರ್: ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬರೊಬ್ಬರಿ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. 
ಏ.09 ರಂದು ಮಹಾರಾಷ್ಟ್ರದಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಮರಾಠ್ ವಾಡಾ ಹಿಂದುಳಿದ ಜನಾಂಗದ ಆಕಾಂಕ್ಷೆಗಳನ್ನು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಮೋದಿ ಜೊತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಹ ಉಪಸ್ಥಿತರಿದ್ದರು. ಜೊತೆಗೆ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಉಪಸ್ಥಿತರಿದ್ದದ್ದೂ ಸಹ ವಿಶೇಷವಾಗಿತ್ತು. ಇದಕ್ಕೂ ಮುನ್ನ 2016 ರ ಡಿ.24 ರಂದು ಅರಬ್ಬಿ ಸಮುದ್ರ ಮಧ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುವಾಗ ಇಬ್ಬರೂ ವೇದಿಕೆ ಹಂಚಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com