ಬಿಜೆಪಿಯಿಂದ ಚುನಾವಣಾ ಆಕ್ರಮ: ಸೂಕ್ತ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಮಾಯಾವತಿ ಒತ್ತಾಯ

ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
ಮಾಯಾವತಿ
ಮಾಯಾವತಿ

ನವದೆಹಲಿ: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ, ಬಿಜೆಪಿ ಚುನಾವಣಾ ಅಕ್ರಮದಲ್ಲಿ   ತೊಡಗಿದೆ ಎಂದು ಆರೋಪಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಮತದಾರರು ತಿರಸ್ಕರಿಸಿದ್ದಾರೆ. ಆದ್ದರಿಂದ  ಮತದಿಂದ ಗೆಲುವು ಸಾಧ್ಯವಿಲ್ಲ ಎಂದು ಮನದಟ್ಟಾಗಿರುವ ಬಿಜೆಪಿಯವರು ನೋಟು,  ಇವಿಎಂ ದುರ್ಬಳಕೆ, ಪೊಲೀಸ್, ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಗೆಲಲ್ಲು ನಿರ್ಧರಿಸಿದ್ದಾರೆ ಎಂದು ಮಾಯಾವತಿ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

ಉಳಿದ ಆರು ಹಂತಗಳ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಯಾವುದೇ ಅಕ್ರಮ ನಡೆಯದಂತೆ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ನಡೆಯಲು ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಮುಂದಿನ ಹಂತದ ಚುನಾವಣಾ ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದದ್ದು ಚುನಾವಣಾ ಆಯೋಗದ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com