ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾದ್ರಾ ಸ್ಪರ್ಧೆ?

ಪ್ರದಾನಿ ನರೇಂದ್ರ ಮೋದಿ ಅವರಿಗೆ ವಾರಣಾಸಿಯಲ್ಲಿ ಸದ್ಯದ ಮಟ್ಟಿಗೆ ಪ್ರಬಲ ಸ್ಪರ್ಧಿ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ...
ಪ್ರಿಯಾಂಕಾ ಗಾಂಧಿ, ನರೇಂದ್ರ ಮೋದಿ
ಪ್ರಿಯಾಂಕಾ ಗಾಂಧಿ, ನರೇಂದ್ರ ಮೋದಿ
Updated on: 
ನವದೆಹಲಿ: ಪ್ರದಾನಿ ನರೇಂದ್ರ ಮೋದಿ ಅವರಿಗೆ ವಾರಣಾಸಿಯಲ್ಲಿ ಸದ್ಯದ ಮಟ್ಟಿಗೆ ಪ್ರಬಲ ಸ್ಪರ್ಧಿ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಾರಣಾಸಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. 
ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಒಪ್ಪಿಗೆ ನೀಡಬೇಕಿದೆ. 
ಸದ್ಯದ ಮಟ್ಟಿಗೆ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಶ್ವಮೇಧ ಕುದುರೆಯನ್ನು ಕಟ್ಟಿ ಹಾಕುವಂತಾ ಪ್ರಬಲ ಸ್ಪರ್ಧಿ ಯಾರು ಕಣದಲ್ಲಿಲ್ಲ. ಮೋದಿ ಅವರ ಗೆಲುವು ಶತಸಿದ್ಧ ಎಂದು ಹೇಳಲಾಗುತ್ತಿತ್ತು. ಇದಕ್ಕೆ ತಡೆಯೊಡ್ಡಲು ಪ್ರಿಯಾಂಕಾ ವಾದ್ರಾ ವಾರಣಾಸಿಯಿಂದಲೇ ಕಣಕ್ಕಿಳಿಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಉತ್ತರಪ್ರದೇಶದಲ್ಲಿ ಹೆಚ್ಚು ಪ್ರವಾಸ ಮಾಡಿರುವ ಪ್ರಿಯಾಂಕಾ ವಾದ್ರಾ ಅಲ್ಲಿನ ಜನರ ಮನ ಗೆಲ್ಲಲು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. 
2014ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದರು. ಮೋದಿಗೆ ಎದುರಾಗಿ ಎಎಪಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಸ್ಪರ್ಧಿಸಿದ್ದು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮೋದಿ ವಿರುದ್ಧ ಸೋತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com