ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಝಣ ಝಣ ಕಾಂಚಾಣ: ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ಧು

ಕೆಲ ದಿನಗಳ ಹಿಂದೆ ಡಿಎಂಕೆ ಅಭ್ಯರ್ಥಿಯೊಬ್ಬರ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದರಿಂದ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಪಡಿಸಲಾಗಿದೆ.

ನವದೆಹಲಿ: ಕೆಲ ದಿನಗಳ ಹಿಂದೆ ಡಿಎಂಕೆ ಅಭ್ಯರ್ಥಿಯೊಬ್ಬರ ಮನೆಯಲ್ಲಿ ಬೃಹತ್ ಪ್ರಮಾಣದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದರಿಂದ  ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದುಪಡಿಸಲಾಗಿದೆ.

ವೆಲ್ಲೂರಿನಲ್ಲಿ ಏಪ್ರಿಲ್ 18 ರಂದು ಗುರುವಾರ ಚುನಾವಣೆ ನಡೆಯಬೇಕಿತ್ತು. ಆದರೆ, ತಮಿಳುನಾಡು ಚುನಾವಣಾ ಆಯೋಗದ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೆಲ್ಲೂರು ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ರದ್ದುಪಡಿಸಿದ್ದಾರೆ.

ಏಪ್ರಿಲ್ 10 ರಂದು ಆದಾಯ ತೆರಿಗೆ ಇಲಾಖೆ ನೀಡಿದ ವರದಿ ಆಧಾರದ ಮೇಲೆ ಕಾತಿರ್ ಆನಂದ್ ಹಾಗೂ ಡಿಎಂಕೆ ಪಕ್ಷದ ಇತರ ಇಬ್ಬರು ಪದಾಧಿಕಾರಿಗಳ ವಿರುದ್ಧ ಜಿಲ್ಲಾ ಪೊಲೀಸರು ದೂರು ದಾಲಿಸಿದ್ದ ಬಳಿಕ ಚುನಾವಣಾ ಆಯೋಗ,  ಚುನಾವಣೆ ರದ್ದುಪಡಿಸುವ  ನಿರ್ಧಾರ ಕೈಗೊಂಡಿತ್ತು.

ಕಾತಿರ್ ಆನಂದ್ ನಾಮಪತ್ರದೊಂದಿಗೆ ಸಲ್ಲಿಸಿರುವ ಚುನಾವಣಾ ಅಫಿಡವಿಟ್ ನಲ್ಲಿ ತಪ್ಪು ಮಾಹಿತಿ ನೀಡಿರುವುದರಿಂದ ಜನಪ್ರತಿನಿಧಿ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇತರರಾದ ಶ್ರೀನಿವಾಸನ್ ಹಾಗೂ ದಾಮೋದರನ್ ವಿರುದ್ಧ ಭ್ರಷ್ಟಾಚಾರದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಚುನಾವಣಾ ಆಯೋಗದ ನಿರ್ಧಾರವನ್ನು ತಮಿಳುನಾಡು ಮುಖ್ಯ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಸೂಚನೆ ಬಗ್ಗೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Related Stories

No stories found.

Advertisement

X
Kannada Prabha
www.kannadaprabha.com