ನಾಮಪತ್ರ ಸಲ್ಲಿಸುತ್ತಿರುವ ಪ್ರಗ್ಯಾ ಸಿಂಗ್
ದೇಶ
ಭೋಪಾಲ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಗ್ಯಾ ಸಿಂಗ್
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಥಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ...
ಭೋಪಾಲ್: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಥಾಕೂರ್ ಅವರು ಮಧ್ಯ ಪ್ರದೇಶ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಿರುವ ಪ್ರಗ್ಯಾ ಸಿಂಗ್ ಥಾಕೂರ್ ಅವರು ತಮ್ಮ ಮೂವರು ಬೆಂಬಲಿಗರು ಹಾಗೂ ವಕೀಲರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದರು.
ಮಹಾರಾಷ್ಟ್ರದ ಮಾಲೆಗಾಂವ್ ನಲ್ಲಿ ಸೆಪ್ಟೆಂಬರ್ 29, 2008ರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದರು. ಸ್ಫೋಟ ಪ್ರಕರಣದ ಏಳು ಆರೋಪಿಗಳಲ್ಲಿ ಪ್ರಗ್ಯಾ ಸಿಂಗ್ ಸಹ ಒಬ್ಬರಾಗಿದ್ದು, ಬಾಂಬೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ