ಕಾಂಗ್ರೆಸ್ ಪರ ಪ್ರಚಾರ ಪೊಲೀಸ್ ಅಧಿಕಾರಿ ವಿರುದ್ಧ ದಾಖಲಾಯ್ತು ಎಫ್ಐಆರ್!
ದೇಶ
ಕಾಂಗ್ರೆಸ್ ಪರ ಪ್ರಚಾರ ಪೊಲೀಸ್ ಅಧಿಕಾರಿ ವಿರುದ್ಧ ದಾಖಲಾಯ್ತು ಎಫ್ಐಆರ್!
ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ಪೊಲೀಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾದ ಘಟನೆ ಮುಂಬೈ ನಲ್ಲಿ ನಡೆದಿದೆ.
ಮುಂಬೈ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ಪೊಲೀಸ್ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾದ ಘಟನೆ ಮುಂಬೈ ನಲ್ಲಿ ನಡೆದಿದೆ.
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದಿರುವ, ಕುಸ್ತಿ ಪಟು- ಸಹಾಯಕ ಪೊಲೀಸ್ ಆಯುಕ್ತ ನರ್ಸಿಂಗ್ ಪಿ.ಯಾದವ್ ವಿರುದ್ಧ ಮುಂಬೈ ವಾಯುವ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಜಯ್ ನಿರುಪಮ್ ಪರ ಪ್ರಚಾರ ಮಾಡಿದ್ದ ಆರೋಪ ಕೇಳಿಬಂದಿತ್ತು. ಅಂಬೋಲಿ ಪೊಲೀಸ್ ಠಾಣೆಯಲ್ಲಿ ಯಾದವ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂಧೇರಿ ವೆಸ್ಟ್ ನ ಯಾದವ್ ನಗರ್ ದಲ್ಲಿ ಭಾನುವಾರ ರಾತ್ರಿ ನರ್ಸಿಂಗ್ ಯಾದವ್ ಸಂಜಯ್ ನಿರುಪಮ್ ಪರ ಮತಯಾಚನೆ ಮಾಡಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ಹಿನ್ನೆಲೆಯಲ್ಲಿ ನರ್ಸಿಂಗ್ ಯಾದವ್ ಇಲಾಖಾ ತನಿಖೆಯನ್ನು ಎದುರಿಸಬೇಕಾಗಿದೆ. ಉತ್ತರ ಪ್ರದೇಶದ ವಾರಾಣಸಿಯಲ್ಲಿ ಜನಿಸಿದ್ದ ನರ್ಸಿಂಗ್ ಯಾದವ್, 2010 ರಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 74 ಕೆಜಿ ವಿಭಾಗದ ಕುಸ್ತಿ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ