4ನೇ ಹಂತದ ಮತದಾನ: ಬೆಳಗ್ಗೆ 9 ಗಂಟೆ ಹೊತ್ತಿಗೆ ಶೇ.10.27ರಷ್ಟು ಮತದಾನ

ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ನಡೆಯುತ್ತಿರುವ 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 9 ಗಂಟೆ ವೇಳೆಗೆ ಶೇ.10.27ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
ಮತದಾನ ಮಾಡಿದ ನಟಿ ಮಾಧುರಿ ಧೀಕ್ಷಿತ್
ಮತದಾನ ಮಾಡಿದ ನಟಿ ಮಾಧುರಿ ಧೀಕ್ಷಿತ್
Updated on
ನವದೆಹಲಿ: ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ನಡೆಯುತ್ತಿರುವ 4ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 9 ಗಂಟೆ ವೇಳೆಗೆ ಶೇ.10.27ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
9 ರಾಜ್ಯಗಳ ಒಟ್ಟು 72 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ನಾಲ್ಕನೇ ಹಂತದಲ್ಲಿ ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಒಡಿಶಾ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಹಲವು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಇನ್ನು ಬೆಳಗ್ಗೆ 9 ಗಂಟೆ ವೇಳೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ.0.68 ರಷ್ಟು , ಜಾರ್ಖಂಡ್ ನಲ್ಲಿ ಶೇ. 12.00 ರಷ್ಟು, ಮಧ್ಯ ಪ್ರದೇಶದಲ್ಲಿ ಶೇ.11.39ರಷ್ಟು, ಮಹಾರಾಷ್ಟ್ರದಲ್ಲಿ ಶೇ. .33ರಷ್ಟು, ಬಿಹಾರದಲ್ಲಿ ಶೇ.10.76ರಷ್ಟು, ಒಡಿಶಾದಲ್ಲಿ ಶೇ. 8.34ರಷ್ಟು, ರಾಜಸ್ಥಾನದಲ್ಲಿಶೇ. 12.26ರಷ್ಟು, ಉತ್ತರ ಪ್ರದೇಶದಲ್ಲಿ ಶೇ.9.83ರಷ್ಟು ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ. 16.89ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com