ದೇಶ

ಲೋಕಸಭಾ ಚುನಾವಣೆ: ಮಧ್ಯ ಪ್ರದೇಶದಲ್ಲಿ ಮೂವರು ಮತಗಟ್ಟೆ ಸಿಬ್ಬಂದಿಗಳ ಸಾವು

ಲೋಕಸಭಾ ಚುನಾವಣೆ: ಮಧ್ಯ ಪ್ರದೇಶದಲ್ಲಿ ಮೂವರು ಮತಗಟ್ಟೆ ಸಿಬ್ಬಂದಿಗಳ ಸಾವು
ಸಾಂದರ್ಭಿಕ ಚಿತ್ರ
Published On :

ಭೂಪಾಲ್ :  ಪ್ರತ್ಯೇಕ ಘಟನೆಗಳಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಒಬ್ಬ ಮಹಿಳೆ ಸೇರಿದಂತೆ ಮೂವರು ಸರ್ಕಾರಿ ಸಿಬ್ಬಂದಿ ಮೃತಪಟ್ಟಿರುವ ಘಟನೆ  ಮಧ್ಯ ಪ್ರದೇಶದಲ್ಲಿ ನಡೆದಿದೆ.  

ಚಿಂದ್ ವಾರಾ ಲೋಕಸಭಾ ಕ್ಷೇತ್ರದ ಸನ್ ಸರ್ ಪ್ರದೇಶದ ಲೊದಿಕೇಡಾ ಮತಗಟ್ಟೆ ಸಿಬ್ಬಂದಿಯಾಗಿ ನಿಯೋಜಿಸಲಾಗಿದ್ದ  ಸುನಂದಾ ಕೊಟೆಕಾರ್ (50 )  ಹೃದಯಾಘಾತದಿಂದ ಕಳೆದ ರಾತ್ರಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿಎಲ್ ಕಾಂತಾ ರಾವ್ ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ ಸಿಂಧಿ ಜಿಲ್ಲೆಯಲ್ಲಿ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೆ ಹೃದಯಾಘಾತವಾಗಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ರಾವ್ ಹೇಳಿದ್ದಾರೆ. ಬ್ರೈನ್ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬಾಲ್ಗಟ್ ಲೋಕಸಭಾ  ಕ್ಷೇತ್ರದ ಸಿಯೋನಿಗೆ ಮತಗಟ್ಟೆ ಸಿಬ್ಬಂದಿಯಾಗಿ ನಿಯೋಜಿಸಲಾಗಿತ್ತು. ಎಂದು ಅವರು ತಿಳಿಸಿದ್ದಾರೆ.

ಮಧ್ಯಪ್ರದೇಶದ ಸಿಂಧಿ, ಷಾಡೊಲ್, ಜಬಲ್ಜುರ್, ಮಂಡ್ಲ, ಬಾಲ್ಗಟ್ ಮತ್ತು ಚಿಂದ್ವಾರ  ವಿಧಾನ ಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಚಿಂದ್ವಾರ  ವಿಧಾನ ಸಭಾ  ಉಪ ಚುನಾವಣೆಗೆ ಮುಖ್ಯಮಂತ್ರಿ ಕಮಲ್ ನಾಥ್  ಸ್ಪರ್ಧಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.