ದೇಶ

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ನಿವೃತ್ತಿ ಘೋಷಿಸಿದ ಶರದ್​ ಪವಾರ್

ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ನಿವೃತ್ತಿ ಘೋಷಿಸಿದ ಶರದ್​ ಪವಾರ್
ಶರದ್ ಪವಾರ್
Published On :
ಮುಂಬೈ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲ್ ಕಾಂಗ್ರೆಸ್​ ಪಕ್ಷ (ಎನ್​ಸಿಪಿ)ದ ಮುಖ್ಯಸ್ಥ ಶರದ್​ ಪವಾರ್ ಅವರು ಸೋಮವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ​ ಘೋಷಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್ ಅವರು,​ ‘ನಮ್ಮ ಕುಟುಂಬದಿಂದ ಮಗಳು ಸುಪ್ರಿಯಾ ಸುಳೆ ಮತ್ತು ಮೊಮ್ಮಗ ಪಾರ್ಥ ಪವಾರ್​ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಹಿಂದೆ ನಾನು 14 ಬಾರಿ ಸ್ಪರ್ಧೆ ಮಾಡಿದ್ದೇನೆ. ಹೀಗಾಗಿ ನಾನು ಚುನಾವಣೆಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಲು ಇದು ಸೂಕ್ತ ಸಮಯ ಎಂದು ತಿಳಿಸಿದ್ದಾರೆ.
78 ವರ್ಷದ ಶರದ್ ಪವಾರ್ ಅವರು ​ನೈರುತ್ಯ ಮಹಾರಾಷ್ಟ್ರದ ಮಾಧ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಮಾಜಿ ಕೇಂದ್ರ ಸಚಿವ ಪವಾರ್ ಅವರು, ತಾವು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.