ಇದಕ್ಕೆ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿರುವ ರಮ್ಯಾ, ರಾಹುಲ್ ಗಾಂಧಿ ಅವರು ಮಾಡಿರುವ ಸುದ್ದಿಗೋಷ್ಠಿಗಳ ಸಂಖ್ಯೆಯನ್ನು ಉಲ್ಲೇಖಿಸಿ ಬಿಜೆಪಿಯನ್ನು ಟೀಕಿಸಿದ್ದಾರೆ. ರಾಹುಲ್ ಗಾಂಧಿ 24 ಬಾರಿ ಸುದ್ದಿಗೋಷ್ಠಿ ನಡೆಸಿದ್ದು, ನರೇಂದ್ರ ಮೋದಿ ಒಮ್ಮೆಯೂ ಸುದ್ದಿಗೋಷ್ಠಿ ನಡೆಸಿಲ್ಲ. ಭಯಭೀತ ಮೋದಿ, ಭಯಭೀತ ಬಿಜೆಪಿ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.