

ಲಖನೌ: ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಉತ್ತರ ಪ್ರದೇಶ ರಾಜ್ಯದ ಅಜಂಗಡ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಅಖಿಲೇಶ್ ಯಾದವ್ ಸ್ಪರ್ಧಿಸಲಿದ್ದಾರೆ.
ಹಾಲಿ ಈ ಕ್ಷೇತ್ರವನ್ನು ಅಖಿಲೇಶ್ ಯಾದವ್ ತಂದೆ ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಪ್ರತಿನಿಧಿಸುತ್ತಿದ್ದಾರೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅಲ್ಲಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷ ಘೋಷಿಸಿದೆ.
ತಂದೆಯ ಕ್ಷೇತ್ರವನ್ನು ಮಗನೇ ಕಸಿದುಕೊಂಡಿದ್ದು, ಮುಲಾಯಂ ಸಿಂಗ್ ಯಾದವ್ ಅವರ ರಾಜಕೀಯ ಭವಿಷ್ಯ ಆತಂತ್ರವಾಗಿದೆ. ಚುನಾವಣೆಗೆ ಸ್ಪರ್ಧಿಸುತ್ತಾರಾ ? ಅಥವಾ ರಾಜಕೀಯದಿಂದ ನಿವೃತ್ತಿಯಾಗಲಿದ್ದಾರೆಯೇ ? ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.