ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದ ಸೆಗ್ಮೆಂಟ್ ನಲ್ಲಿ ವಿವಿಪ್ಯಾಟ್ ಮಾದರಿ ಸಮೀಕ್ಷೆ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಮಾ.28 ರ ಸಂಜೆ 4 ಗಂಟೆಯೊಳಗೆ ಪ್ರತಿಕ್ರಿಯೆ ನೀಡಬೇಕೆಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ಸೂಚನೆ ನೀಡಿದೆ.