ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ: ರಾಹುಲ್ ಗಾಂಧಿ ಭೇಟಿ ಬಳಿಕ ಶತೃಘ್ನ ಸಿನ್ಹಾ ಹೇಳಿಕೆ

Published On :
ನವದೆಹಲಿ: ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಖ್ಯಾತ ಬಾಲಿವುಡ್ ನಟ ಹಾಗೂ ಬಿಜೆಪಿ ರೆಬೆಲ್ ಮುಖಂಡ ಶತೃಘ್ನ ಸಿನ್ಹಾ ಹೇಳಿದ್ದಾರೆ.
ಗುರುವಾರ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಶತೃಘ್ನ ಸಿನ್ಹಾ, ನಾನು ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಅಂತೆಯೇ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ ಕುಟುಂಬವನ್ನು ಹೊಗಳಿರುವ ಶತೃಘ್ನ ಸಿನ್ಹಾ ದೇಶ ನಿರ್ಮಾಣ ಕಾರ್ಯದಲ್ಲಿ ಗಾಂಧಿ ಕುಟುಂಬ ನಿರ್ಣಾಯ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ರಾಹುಲ್ ಗಾಂಧಿ ನಾಯಕತ್ವವನ್ನು ಹಾಡಿಹೊಗಳಿರುವ ಸಿನ್ಹಾ, ರಾಹುಲ್ ಗಾಂಧಿ ಸಾಕಷ್ಟು ಧನಾತ್ಮಕ ಗುಣಗಳನ್ನು ಹೊಂದಿದ್ದಾರೆ. ಪ್ರತಿಯೊಬ್ಬರನ್ನೂ ಪ್ರೋತ್ಸಾಹಿಸುತ್ತಾರೆ. ವಯಸ್ಸಿನಲ್ಲಿ ನನಗಿಂತ ಕಿರಿಯನಾದರೂ, ಇಂದು ಆತ ದೇಶದ ಜನಪ್ರಿಯ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಇಂದು ನಾನು ಬಿಜೆಪಿ ತೊರೆಯುತ್ತಿರುವುದಕ್ಕೆ ಅಲ್ಲಿನ ಸರ್ವಾಧಿಕಾರಿ ಧೋರಣೆಯೇ ಕಾರಣ. ಇದೇ ಕಾರಣಕ್ಕಾಗಿ ನಾನು ಇಂದು ತುಂಬಾ ನೋವಿನಿಂದ ಬಿಜೆಪಿ ತೊರೆಯುತ್ತಿದ್ದು, ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhibjpಬಿಜೆಪಿRahul Gandhiರಾಹುಲ್ ಗಾಂಧಿShatrughan Sinhaಶತ್ರುಘ್ನ ಸಿನ್ಹಾಲೋಕಸಭಾ ಚುನಾವಣೆ 2019Loksabha Election 2019
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


