ನನಗೆ ಪ್ರಧಾನಿಯಾಗುವ ಯಾವುದೇ ಆಸೆ, ಆಕಾಂಕ್ಷೆಗಳಿಲ್ಲ: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪ್ರಧಾನ ಮಂತ್ರಿಯಾಗುವ ಸಾಮರ್ಥ್ಯಗಳಿವೆ...
ಎನ್ ಚಂದ್ರಬಾಬು ನಾಯ್ಡು
ಎನ್ ಚಂದ್ರಬಾಬು ನಾಯ್ಡು
Updated on
ವಿಜಯವಾಡ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪ್ರಧಾನ ಮಂತ್ರಿಯಾಗುವ ಸಾಮರ್ಥ್ಯಗಳಿವೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿಕೆಗೆ ಸ್ವತಃ ಚಂದ್ರಬಾಬು ನಾಯ್ಡು ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ತಮಗೆ ಅಂತಹ ಯಾವುದೇ ಆಕಾಂಕ್ಷೆಗಳಿಲ್ಲ ಎಂದು ಹೇಳಿದ್ದಾರೆ.
ನನಗೆ ಅಂತಹ ಯಾವುದೇ ಆಸೆ, ಆಕಾಂಕ್ಷೆಗಳಿಲ್ಲ. ಬಿಜೆಪಿಯೇತರ ಎಲ್ಲಾ ಪಕ್ಷಗಳ ನಾಯಕರು ಒಟ್ಟಾಗಿ ಚರ್ಚಿಸಿ ಪ್ರಧಾನ ಮಂತ್ರಿ ಹುದ್ದೆಗೆ ಯಾರು ಸೂಕ್ತ ಅಭ್ಯರ್ಥಿ ಎಂದು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.
ರಾಜಕೀಯ ನಿರ್ಬಂಧಗಳನ್ನು ಹೊರತುಪಡಿಸಿ ಹಲವು ರಾಜ್ಯಗಳಲ್ಲಿ ರಾಜಕೀಯ ಪಕ್ಷಗಳು ಬಿಜೆಪಿಯನ್ನು ವಿರೋಧಿಸುವುದು ಮಾತ್ರವಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಆದರೆ ಚುನಾವಣೆ ಬಳಿಕ ಎಲ್ಲಾ ಬಿಜೆಪಿಯೇತರ ಪಕ್ಷಗಳು ಒಂದಾಗಲಿವೆ. ಅದು ಪ್ರಜಾಪ್ರಭುತ್ವ ನಿರ್ಬಂಧವಾಗಿದೆ ಎಂದು ನಾಯ್ಡು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com