ಅರವಿಂದ್ ಕೇಜ್ರಿವಾಲ್ ಅವರಿಗೆ ಕಪಾಳಮೋಕ್ಷ ಮಾಡುತ್ತಿರುವ ವ್ಯಕ್ತಿ
ದೇಶ
ರೋಡ್ ಶೋ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕಪಾಳಮೋಕ್ಷ
ದೆಹಲಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಶನಿವಾರ ನಡೆದಿದೆ.
ನವದೆಹಲಿ: ದೆಹಲಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಶನಿವಾರ ನಡೆದಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ದೆಹಲಿಯ ಮೋತಿನಗರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಕೇಜ್ರಿವಾಲ್ ಅವರ ಕಾರನ್ನು ಹತ್ತಿದ ಅಪರಿಚಿತ ಯುವಕ ಸಿಎಂಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ತಕ್ಷಣ ಕೇಜ್ರಿವಾಲ್ ಅವರ ರಕ್ಷಣೆಗೆ ಧಾವಿಸಿದ ಬೆಂಬಲಿಗರು, ಯುವಕನನ್ನು ಸೆರೆ ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ ಈ ವ್ಯಕ್ತಿ ಯಾರು, ಯಾವ ಕಾರಣಕ್ಕೆ ಕಪಾಳ ಮೋಕ್ಷ ಮಾಡಿದ್ದಾನೆ ಎಂಬ ವಿವರ ತಿಳಿದು ಬಂದಿಲ್ಲ.
ಈ ಹಿಂದೆ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಆಟೋ ಚಾಲಕನೋರ್ವ ಕೇಜ್ರಿವಾಲ್ ಗೆ ಕಪಾಳಮೋಕ್ಷ ಮಾಡಿದ್ದ. ಇತ್ತೀಚಿಗೆ ಕಚೇರಿಯೊಂದರಲ್ಲಿ ಅರವಿಂದ್ ಮೇಲೆ ಆಗುಂತಕನೋರ್ವ ಮಸಿ ಎರಚಿ ಹಲ್ಲೆಗೆ ಯತ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ