ನವದೆಹಲಿ: ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕುರಿತಂತೆ "ರಾಜೀವ್ ಸಾಯುವ ಮುನ್ನ ಅವರು ನಂ 1 ಭ್ರಷ್ಟರಾಗಿದ್ದರು" ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಟೀಕೆ ಸಂಬಂಧ ಚುನಾವಣಾ ಆಯೋಗ (ಇಸಿ) ಪ್ರಧಾನಿಗೆ ಕ್ಲೀನ್ ಚಿಟ್ ನೀಡಿದೆ. ಪ್ರಧಾನಿ ಮೋದಿ ವಿರುದ್ಧ ಮಾದರಿ ನೀತಿ ಸಂಹಿತೆ ಆರೋಪ ಮಾಡಿದ್ದ ಕಾಂಗ್ರೆಸ್ ಆಯೋಗಕ್ಕೆ ದೂರು ಸಲ್ಲಿಸಿತ್ತು.