ಅವಹೇಳನಕಾರಿ ಕರಪತ್ರ: ಆಪ್ ಅಭ್ಯರ್ಥಿ ಆತಿಶಿ ಕಣ್ಣೀರು, ಗೌತಮ್ ಗಂಭೀರ್ ವಿರುದ್ಧ ಆರೋಪ

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆತಿಶಿ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚಿಕೆಯಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ.
ಆಪ್ ಅಭ್ಯರ್ಥಿ ಆತಿಶಿ
ಆಪ್ ಅಭ್ಯರ್ಥಿ ಆತಿಶಿ
ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆತಿಶಿ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ  ಹಂಚಿಕೆಯಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟಿದ್ದಾರೆ.
ಮೇ.09 ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಆತಿಶಿ, ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ನಮ್ಮ ದೇಶದಲ್ಲಿ ರಾಜಕೀಯ ಅಧಃಪತನಗೊಂಡಿದೆ. ಈ ವಿಷಯವನ್ನು ಮಾಧ್ಯಮಗಳ ಮುಂದೆ ಮಾತನಾಡುವುದಕ್ಕೆ ಬೇಸರವಾಗುತ್ತೆ ಎಂದು ಆತಿಶಿ ಕಣ್ಣೀರಿಟ್ಟಿದ್ದಾರೆ.  
ಗೌತಮ್ ಗಂಭೀರ್ ರಾಜಕೀಯಕ್ಕೆ ಸೇರ್ಪಡೆಯಾದಾಗ ನಾನು "ರಾಜಕೀಯದಲ್ಲಿ ಒಳ್ಳೆಯ ವ್ಯಕ್ತಿಗಳು ಅವಶ್ಯಕ ಎಂದು ಹೇಳಿದ್ದೆ. ಆದರೆ ಈಗ ಅವರು ಮತ್ತೆ ಅವರ ಪಕ್ಷ ಯಾವ ಮಟ್ಟಕ್ಕೆ ಬೇಕಾದರೂ ಇಳಿಯಬಹುದೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಆತಿಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಮಹಿಳೆಯನ್ನು ಸೋಲಿಸುವುದಕ್ಕೆ ಗಂಭೀರ್ ಈ ಮಟ್ಟಕ್ಕೆ ಇಳಿಯುವುದಾದರೆ ಸಂಸದರಾದ ನಂತರ ಮಹಿಳೆಯರಿಗೆ ಭದ್ರತೆಯನ್ನು ಹೇಗೆ ನೀಡುತ್ತಾರೆ ಎಂದು ಆತಿಶಿ ಪ್ರಶ್ನಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com