ಕೇಜ್ರಿವಾಲ್ ಅಂಡ್ ಟೀಂ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲು!

ಈಗಾಗಲೇ ಮಾನನಷ್ಟ ಮೊಕದ್ದಮೆಗಳ ಸರಣಿ ಪ್ರಕರಣಗಳಿಂದ ಸುದ್ದಿಗೆ ಗ್ರಾಸವಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ತಂಡದ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ನವದೆಹಲಿ: ಈಗಾಗಲೇ ಮಾನನಷ್ಟ ಮೊಕದ್ದಮೆಗಳ ಸರಣಿ ಪ್ರಕರಣಗಳಿಂದ ಸುದ್ದಿಗೆ ಗ್ರಾಸವಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ತಂಡದ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಾಗಿದೆ.
ಹೌದು.. ದೆಹಲಿಯ ದೆಹಲಿ ಲೋಕಸಭಾ ಕ್ಷೇತ್ರದ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆತಿಶಿ ವಿರುದ್ಧ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಆಕ್ಷೇಪಾರ್ಹ ಕರಪತ್ರ ಹಂಚಿಕೆ ಮಾಡಿ ಅವರ ಮಾನಹಾನಿಗೆ ಯತ್ನಿಸಿದ್ದಾರೆ ಎಂಬ ಆಪ್ ಪಕ್ಷದ ಗಂಭೀರ ಆರೋಪಕ್ಕೆ ಗೌತಮ್ ಗಂಭೀರ್, ಗಂಭೀರವಾಗಿಯೇ ತಿರುಗೇಟು ನೀಡಿದ್ದಾರೆ. ಈ ಹಿಂದೆ ತಮ್ಮ ವಿರುದ್ಧ ಕೇಳಿ ಬಂದ ಆರೋಪ ಸಾಬೀತಾದರೆ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದ ಗಂಭೀರ್, ಆರೋಪ ಸುಳ್ಳಾದರೆ ನೀವು ರಾಜಕೀಯದಿಂದ ನಿವೃತ್ತರಾಗುತ್ತಿರಾ ಎಂದು ಕೇಜ್ರಿವಾಲ್ ಮತ್ತು ಆತಿಶಿ ಅವರನ್ನು ಪ್ರಶ್ನಿಸಿದ್ದರು.
ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಗಂಭೀರ್ ಕೇಜ್ರಿವಾಲ್, ಆಪ್ ಅಭ್ಯರ್ಥಿ ಆತಿಶಿ ಮತ್ತು ಮತ್ತಿತರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಬಗ್ಗೆ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಗಂಭೀರ್, ಆತಿಶಿ ಅವರ ವಿರುದ್ಧ ಹಂಚಿಕೆಯಾಗುತ್ತಿರುವ ಕರಪತ್ರ ಪ್ರಕರಣವನ್ನು ನಾನೂ ಕೂಡ ಕಟು ಶಬ್ದಗಳಿಂದ ಖಂಡಿಸುತ್ತೇನೆ. ಆದರೆ ಆ ಕೆಲಸ ನನ್ನದಲ್ಲ. ನಾನು ಸ್ತೀಯರನ್ನು ಗೌರವಿಸುವ ಸುಸಂಸ್ಕೃತ ಕುಟುಂಬದಿಂದ ಬಂದವನಾಗಿದ್ದು, ಇಂತಹ ನೀಚ ಕೆಲಸವನ್ನು ನನ್ನಿಂದ ಊಹಿಸಿಕೊಳ್ಳಲೂ ಅಸಾಧ್ಯ. ಸಿಎಂ ಆಗಿ ವಿಫಲವಾಗಿರುವ ಅರವಿಂದ್ ಕೇಜ್ರಿವಾಲ್ ಅವರು ಇಂತಹ ನೀಚ ರಾಜಕಾರಣಕ್ಕೆ ಇಳಿಯಬಾರದು. ಕೂಡಲೇ ಅವರು ಈ ಕೃತ್ಯಗಳನ್ನು ನಿಲ್ಲಿಸಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಗಂಭೀರ್ ಹೇಳಿದ್ದಾರೆ.
ಇನ್ನು ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಆಪ್ ಆಭ್ಯರ್ಥಿ ಆತಿಶಿ, ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ತಮ್ಮ ವಿರುದ್ಧ ಅವಹೇಳನಕಾರಿ ಕರಪತ್ರ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com