ನೀಚ್ ಆದ್ಮಿ ಹೇಳಿಕೆ ವಿವಾದ: ಮಣಿ ಶಂಕರ್ ಅಯ್ಯರ್ ಕಾಂಗ್ರೆಸ್ ನಿಂದ ಉಚ್ಚಾಟನೆ ಡ್ರಾಮಾ- ಪ್ರಧಾನಿ ಮೋದಿ

ತಮ್ಮ ವಿರುದ್ಧ ನೀಚ್ ಆದ್ಮಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿಲ್ಲ, ಅದೊಂದು ನಾಟಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಚಂಡೀಗಢ: ತಮ್ಮ ವಿರುದ್ಧ ನೀಚ್ ಆದ್ಮಿ ಹೇಳಿಕೆ ನೀಡಿದ್ದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಿಲ್ಲ, ಅದೊಂದು ನಾಟಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ನರೇಂದ್ರ ಮೋದಿ ಗುಜರಾತ್ ಚುನಾವಣೆ ಸಂದರ್ಭದಲ್ಲಿ ತಮ್ಮನ್ನು ಕಾಂಗ್ರೆಸ್ ಪಕ್ಷದ ಮಾಜಿ ಸಚಿವರೊಬ್ಬರು ನೀಚ ಜಾತಿಯವರು ಎಂದು ನಿಂದಿಸಿದ್ದರು. ಅದು ಗುಜರಾತಿನಲ್ಲಿ  ಬಿರುಗಾಳಿ ಎಬ್ಬಿಸಿತ್ತು. ನಂತರ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ನಾಟಕ ಮಾಡಲಾಯಿತು. ಕೆಲ ದಿನಗಳ ಬಳಿಕ ಮತ್ತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

1984ರ ಸಿಖ್ ವಿರೋಧಿ ಹಿಂಸಾಚಾರ ಕುರಿತಂತೆ  ಕಾಂಗ್ರೆಸ್ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ವಿವಾದಾತ್ಮಕ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ನರೇಂದ್ರ ಮೋದಿ, ಪಂಜಾಬ್ ನಲ್ಲಿ  ಚುನಾವಣೆ ಮುಗಿಯುತ್ತಿದ್ದಂತೆ  ರಾಹುಲ್ ಗಾಂಧಿ , ತನ್ನ ಗುರು ಸ್ಯಾಮ್ ಪಿತ್ರೋಡಾ ಅವರನ್ನು ತಬ್ಬಿಕೊಳ್ಳಲಿದ್ದಾರೆ ಎಂದರು.

ಮಣಿ ಶಂಕರ್ ಅಯ್ಯರ್ ಏನು ತಪ್ಪು ಮಾಡಿದ್ದಾರೆ ಎಂಬುದರ ಬಗ್ಗೆ ಕಾಂಗ್ರೆಸ್ ಯೋಚನೆ ಮಾಡುವುದೇ ಇಲ್ಲ ಎಂದು ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತಾವು ನೀಡಿದ್ದ ನೀಚ್ ಆದ್ಮಿ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು  ಮಣಿಶಂಕರ್ ಅಯ್ಯರ್  ಮಂಗಳವಾರ ಸುದ್ದಿಸಂಸ್ಥೆಯೊಂದಕ್ಕೆ ಹೇಳಿಕೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com