ವಾರಣಾಸಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಬೃಹತ್ ರೋಡ್ ಶೋ,ಜನ ಸಾಗರ

ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಇಂದು ಸಂಜೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೃಹತ್ ರೋಡ್ ಶೋ ನಡೆಸಿದರು. ವಿವಿಧೆಡೆಗಳಿಂದ ಜನಸಾಗರವೇ ಹರಿದುಬಂದಿತು
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
Updated on

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ಇಂದು ಸಂಜೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೃಹತ್ ರೋಡ್ ಶೋ ನಡೆಸಿದರು. ವಿವಿಧೆಡೆಗಳಿಂದ ಜನಸಾಗರವೇ ಹರಿದುಬಂದಿತು.

ಬನಾರಸ್ ಹಿಂದೂ ವಿಶ್ವವಿದ್ಯಾಲದ ದ್ವಾರದಲ್ಲಿರುವ ಮದನ್ ಮೋಹನ್ ಮಾಳವಿಯಾ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮೋದಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ  ಪ್ರಿಯಾಂಕಾ ಗಾಂಧಿ ವಾದ್ರಾ ರೋಡ್ ಶೋ ಆರಂಭಿಸಿದರು.

ಛತೀಸ್ ಗಢದ ಮುಖ್ಯಮಂತ್ರಿ ಭೂಪೇಸ್ ಬಾಘೆಲ್ ಮತ್ತಿತರ ನಾಯಕರು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸಾಥ್ ನೀಡಿದರು. ರಸ್ತೆ ಇಕ್ಕೆಲಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಜಮಾಯಿಸುವ ಮೂಲಕ ಮೋದಿ ವಿರುದ್ಧ ಘೋಷಣೆ ಕೂಗಿದರು.

ಮೋದಿ ರೋಡ್ ಶೋ ನಡೆಸಿದ ಮೂರು ವಾರಗಳ ಬಳಿಕ ದೇವಾಲಯಗಳ ನಗರಿಯಲ್ಲಿ ಕಾಂಗ್ರೆಸ್ ಇಂದು ಶಕ್ತಿ ಪ್ರದರ್ಶಿಸಿತು. ರೋಡ್ ಶೋಗಾಗಿ ಕಾಂಗ್ರೆಸ್ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಿತ್ತು ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.

ಮೋದಿ ರೋಡ್ ಶೋ ನಂತೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ರೋಡ್ ಶೋ ದಶಶ್ವಮೇದ ಘಾಟ್ ಬಳಿ ಅಂತ್ಯಗೊಂಡಿತು ನಂತರ  ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮೋದಿ ರಾಜಕೀಯ ಅಭಿವೃದ್ಧಿಯನ್ನು ಕೊಡಿಲ್ಲ,  ಆದರೆ, ಪ್ರಚಾರ ಹಾಗೂ ಸುಳ್ಳಿನಿಂದ ಕೂಡಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com