ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಮೋದಿ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದಿದ್ದಾರೆ, ಇವತ್ತು ನಾನು ಡಮ್ ಡಮ್ ನಲ್ಲಿ ರ್ಯಾಲಿ ನಡೆಸಲು ಉದ್ದೇಶಿಸಿದ್ದೇನೆ, ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅದಕ್ಕೆ ಅವಕಾಶ ಕೊಡುತ್ತಾರೋ ಇಲ್ಲವೋ ಗೊತ್ತಿಲ್ಲ, ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಬಿಡುತ್ತಾರೋ ಇಲ್ಲವೋ ಎಂಬ ಸಂಶಯ ಕಾಡುತ್ತಿದೆ ಎಂದು ತಿಳಿಸಿದ್ದಾರೆ.